ಕರ್ನಾಟಕ

karnataka

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಬಾದಾಮಿ ಪ್ರವಾಸ

By

Published : Sep 13, 2020, 10:52 PM IST

ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ನರಗುಂದ ಮಾರ್ಗವಾಗಿ ಬಾದಾಮಿ ವಿಧಾನಸಭೆ ಕ್ಷೇತ್ರದ ಗೋಪನಕೊಪ್ಪ ಹಳೆ ಬ್ಯಾರೇಜ್​​ಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ
ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ

ಬೆಂಗಳೂರು: ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನಾಳೆಯಿಂದ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

ತಾವು ಪ್ರತಿನಿಧಿಸುವ ಬಾದಾಮಿ ಕ್ಷೇತ್ರಕ್ಕೆ ನಾಳೆ ಬೆಳಗ್ಗೆ ತೆರಳುವ ಅವರು ಮಂಗಳವಾರ ಸಂಜೆ ವಾಪಸಾಗಲಿದ್ದಾರೆ. ನಾಳೆ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ತೆರಳುವ ಅವರು ನರಗುಂದ ಮಾರ್ಗವಾಗಿ ಬಾದಾಮಿ ವಿಧಾನಸಭೆ ಕ್ಷೇತ್ರದ ಗೋಪನಕೊಪ್ಪ ಹಳೆ ಬ್ಯಾರೇಜ್​​ಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಇದಾದ ಬಳಿಕ ಚೋಳಚಗುಡ್ಡ ಗ್ರಾಮದ ಬಳಿ ಪ್ರವಾಹದಿಂದ ತೊಂದರೆಗೊಳಗಾದ ಜಮೀನುಗಳನ್ನು ವೀಕ್ಷಿಸಲಿದ್ದಾರೆ. ಅಲ್ಲಿಂದ ಬಾದಾಮಿ ತಾಲೂಕು ಪಂಚಾಯಿತಿ ಸಭಾಭವನಕ್ಕೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸುವರು. ನಂತರ ಸಾರ್ವಜನಿಕರ ಭೇಟಿಗೆ ಶಾಸಕರ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ರಾತ್ರಿ ಬಾದಾಮಿಯಲ್ಲಿಯೇ ವಾಸ್ತವ್ಯ ಹೂಡುವ ಅವರು ಮಂಗಳವಾರ ಬಾದಾಮಿಯ ಕುಡಿಯುವ ನೀರಿನ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಗುಳೇದಗುಡ್ಡ ಕರನಂದಿ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಇದಾದ ಬಳಿಕ ಶಕ್ತಿ ಚಿತ್ರಮಂದಿರ ಸಮೀಪ ಮಲ್ಟಿ ಜಿಮ್ ಉದ್ಘಾಟನೆ ಮಾಡುವರು. ಮಧ್ಯಾಹ್ನ ಅಲ್ಲಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಿ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸುವರು.

ಪ್ರವಾಸ ಕಾರ್ಯಕ್ರಮ ಪಟ್ಟಿ

ಇಂದು ಎಚ್​.ಕೆ. ಪಾಟೀಲ್ ಭೇಟಿ:

ಮಹಾರಾಷ್ಟ್ರ ಉಸ್ತುವಾರಿಯಾಗಿ ಎಐಸಿಸಿಯಿಂದ ನೇಮಕವಾಗಿರುವ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಎಚ್.ಕೆ. ಪಾಟೀಲ್ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಇಂದು ತಮ್ಮ ನಿವಾಸಕ್ಕೆ ಆಗಮಿಸಿದ್ದ ಎಚ್. ಕೆ . ಪಾಟೀಲ್ ಅವರನ್ನು ಸಿದ್ದರಾಮಯ್ಯ ಬರಮಾಡಿಕೊಂಡು ಅಭಿನಂದಿಸಿದರು. ಉಭಯ ನಾಯಕರು ಕೆಲಕಾಲ ಸಮಾಲೋಚಿಸಿದರು. ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ಏಳಿಗೆಗೆ ಶ್ರಮಿಸಲು ಮುಂದಾಗಿರುವ ಎಚ್.ಕೆ. ಪಾಟೀಲರಿಗೆ ಸಿದ್ದರಾಮಯ್ಯ ಒಂದಿಷ್ಟು ಸಲಹೆ, ಸೂಚನೆ ನೀಡಿದರು.

ABOUT THE AUTHOR

...view details