ಕರ್ನಾಟಕ

karnataka

ETV Bharat / state

ನಾಮಪತ್ರ ಸಲ್ಲಿಸಲು ಎರಡೇ ದಿನ ಬಾಕಿ: ಆಕಾಂಕ್ಷಿಗಳಲ್ಲಿ ಹೆಚ್ಚಿದ ತಳಮಳ - ಏಪ್ರೀಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ

ಬಂಡಾಯದ ಬಿಸಿ ನಡುವೆಯೂ ಬಿಜೆಪಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಎರಡು ಕ್ಷೇತ್ರ ಬಾಕಿ ಉಳಿಸಿಕೊಂಡಿದೆ. ಕಾಂಗ್ರೆಸ್ 209 ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿದ್ದು, ಇನ್ನೂ 15 ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟಿಸಬೇಕಿದೆ. ಜೆಡಿಎಸ್ 150 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. 74 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಮಾಡಬೇಕಿದೆ.

Jameer, Bairathi Basavaraj, Manjula Limbavali submitted nomination paper.
ಜಮೀರ್, ಬೈರತಿ ಬಸವರಾಜು, ಮಂಜುಳಾ ಲಿಂಬಾವಳಿ ನಾಮಪತ್ರ ಸಲ್ಲಿಸಿದರು.

By

Published : Apr 18, 2023, 6:08 PM IST

ಬೆಂಗಳೂರು: ನಾಮಪತ್ರ ಸಲ್ಲಿಸಲು ಇನ್ನು ಎರಡು ದಿನ ಮಾತ್ರ ಬಾಕಿ ಇದೆ. ಆದರೆ ಮೂರೂ ಪಕ್ಷಗಳು ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಒಂದು ಕಡೆ ಆಕಾಂಕ್ಷಿಗಳಲ್ಲಿ ಆತಂಕ, ತಳಮಳ ಹೆಚ್ಚಾಗಿದ್ದರೆ, ಮತ್ತೊಂದೆಡೆ ಘೋಷಣೆಯಾಗಿರುವ ಅಭ್ಯರ್ಥಿಗಳ ಪರ ನಾಯಕರು ಪ್ರಚಾರ ನಡೆಸುತ್ತಿದ್ದಾರೆ.

ಟಿಕೆಟ್ ಘೋಷಣೆಯಾಗಿರುವ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಶಕ್ತಿ ಪ್ರದರ್ಶನದ ಮೂಲಕ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಸ್ವಂತ ಬಲದಲ್ಲಿ ಅಧಿಕಾರಕ್ಕೆ ಇರಲೇಬೇಕೆಂದು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಪಣ ತೊಟ್ಟಿದ್ದರೂ, ಮೂರು ಪಕ್ಷಗಳು ಪೂರ್ಣ ಪ್ರಮಾಣದಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿಲ್ಲ. ಇದರ ಜತೆಗೆ ಬಂಡಾಯದ ‌ಬಿಸಿ ಎದುರಿಸುತ್ತಿವೆ.

ರಾಜ್ಯದಲ್ಲಿ 224 ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಏಪ್ರಿಲ್ 20 ಕಡೆಯ ದಿನವಾಗಿದೆ. ರಾಜಕೀಯ ಪಕ್ಷಗಳು ಬಾಕಿ ಉಳಿಸಿಕೊಂಡಿರುವ ಅಭ್ಯರ್ಥಿಗಳ ಪಟ್ಟಿಯನ್ನು ಯಾವುದೇ ಕ್ಷಣದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನಾಮಪತ್ರ ಸಲ್ಲಿಕೆ ಬಿರುಸು: ಮುಂದಿನ ತಿಂಗಳು ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಬಿರುಸುಗೊಂಡಿದೆ. ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲು ಕೊನೆ ದಿನವಾಗಿದ್ದು, ಇಂದೂ ಸಹ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿತ್ತು.

ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ:ನಾಮಪತ್ರ ಸಲ್ಲಿಕೆ ಮುನ್ನ ಅಭ್ಯರ್ಥಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮೆರವಣಿಗೆ ಮೂಲಕ ತೆರಳಿದ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಪ್ರಮುಖವಾಗಿ ಚಾಮರಾಜಪೇಟೆ ಕ್ಷೇತ್ರದಿಂದ ಜಮೀರ್ ಅಹ್ಮದ್ ಖಾನ್ ತಮ್ಮ ಬೆಂಬಲಿಗ ರೊಂದಿಗೆ ತೆರಳಿ ಉಮೇದುವಾರಿಕೆ ಸಲ್ಲಿಸಿದರು.

ಕೆ.ಆರ್.ಪುರ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಬಿ.ಎ.ಬಸವರಾಜ (ಬೈರತಿ) ಅವರು ‌ಕೆಅರ್​​ಪುರ ಬಿಬಿಎಂಪಿ ಕಚೇರಿಯಲ್ಲಿ ‌ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ಇನ್ನು ಮಹದೇವಪುರದ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಈ ಬಾರಿ ಮಂಜುಳಾ ಅರವಿಂದ ಲಿಂಬಾವಳಿ ನಾಮಪತ್ರ ಸಲ್ಲಿಸಿದರು.

ದಾಸರಹಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜುನಾಥ್, ಬಿಜೆಪಿ ಅಭ್ಯರ್ಥಿ ಮುನಿರಾಜು, ಬಿಟಿಎಂ ಲೇಔಟ್‌ನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮಲಿಂಗಾರೆಡ್ಡಿ, ಜಯನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ.ರಾಮಮೂರ್ತಿ, ಗಾಂಧಿನಗರದಿಂದ ಸಪ್ತಗಿರಿಗೌಡ, ಬಸವನಗುಡಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಅರಮನೆ ಶಂಕರ್, ವಿಜಯನಗರದಿಂದ ಕೃಷ್ಣಪ್ಪ ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಇದನ್ನೂಓದಿ:ಬೆಂಗಳೂರು: ತೃತೀಯ ಲಿಂಗಿ ಕಲಾವಿದರಿಂದ ಮತದಾನದ ಜಾಗೃತಿ

ABOUT THE AUTHOR

...view details