ಬೆಂಗಳೂರು: ಕೊರೊನಾ ಮಹಾಮಾರಿಗೆ ನಗರದಲ್ಲಿ ಇಬ್ಬರು ಮಹಿಳೆಯರು ಬಲಿಯಾಗಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ಗೆ ಮತ್ತಿಬ್ಬರು ಬಲಿ: ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ - Bengaluru Covid Update
ಬೆಂಗಳೂರಿನಲ್ಲಿ ಕೋವಿಡ್ಗೆ ಮತ್ತಿಬ್ಬರು ಬಲಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅಗ್ರಹಾರ ದಾಸರಹಳ್ಳಿ ವಾರ್ಡ್ ಮತ್ತು ಮಹಾಲಕ್ಷ್ಮಿ ಲೇಔಟ್ ಮುನೇಶ್ವರ ಬ್ಲಾಕ್ನ ಮಹಿಳೆಯರು ಮೃತಪಟ್ಟಿದ್ದಾರೆ.
ಮೇ. 28 ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಅಗ್ರಹಾರ ದಾಸರಹಳ್ಳಿ ವಾರ್ಡ್ನ 61 ವರ್ಷದ ಮಹಿಳೆ ರೋಗಿ ಸಂಖ್ಯೆ- 2519 ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ಸಂಪರ್ಕದಿಂದ ಸೋಂಕಿಗೆ ತುತ್ತಾಗಿದ್ದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ಮುನೇಶ್ವರ ಬ್ಲಾಕ್ನ 65 ವರ್ಷದ ಮಹಿಳೆ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಕೋವಿಡ್ ವರದಿ ಬರುವುದರೊಳಗೆ ಮೃತಪಟ್ಟಿದ್ದರು. ಇದೀಗ ವರದಿ ಬಂದಿದ್ದು ಕೋವಿಡ್ ಪಾಸಿಟಿವ್ ಬಂದಿದೆ. ಹೀಗಾಗಿ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್ ಮಾಡಲಾಗುತ್ತಿದೆ ಎಂದು ಬಿಬಿಎಂಪಿಯ ಡಾ.ಮನೋರಂಜನ್ ಹೆಗಡೆ ತಿಳಿಸಿದ್ದಾರೆ.