ಬೆಂಗಳೂರು :ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಇಬ್ಬರು ನಟೋರಿಯಸ್ ಡ್ರಗ್ ಪೆಡ್ಲರ್ಗಳನ್ನು ಬಂಧಿಸಿದ್ದಾರೆ.
ಜೇಡನ್ ಸೌದ್ ಮತ್ತು ನಾಗರಾಜ್ ರಾವ್ ಬಂಧಿತ ಆರೋಪಿಗಳಾಗಿದ್ದು, ಬಂಧಿತರಿಂದ 10 ಲಕ್ಷ ಮೌಲ್ಯದ 100 ಎಲ್ಎಸ್ಡಿ ಪೇಪರ್, 100 ಎಕ್ಸಟೇಸಿ ಟ್ಯಾಬ್ಲೆಟ್ಸ್ ವಶ ಪಡಿಸಿಕೊಳ್ಳಲಾಗಿದೆ.

ಅನೂಜ್ ಮತ್ತು ಹರ್ಷವರ್ಧನ್ ಎಂಬುವವರಿಂದ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿ ಮಾಡುತ್ತಿದ್ದ ಆರೋಪಿಗಳು ಟೆಕ್ಕಿಗಳು, ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿದ್ದರು.
ಬನಶಂಕರಿ ಬಳಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಸಿಸಿಬಿ ನಾರ್ಕೋಟಿಕ್ ಕಂಟ್ರೋಲ್ ವಿಂಗ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಸಿಸಿಬಿ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.