ಬೆಂಗಳೂರು : ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸರ ಕಾರ್ಯಾಚರಣೆಯಿಂದ ಬನಶಂಕರಿ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ವಿದೇಶಿಗರ ಬಂಧನವಾಗಿದೆ.
ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವಿದೇಶಿಗರ ಬಂಧನ - foreign drug peddlers arrests news
ಸಿಲಿಕಾನ್ ಸಿಟಿ ಬೆಂಗಳೂರಿನ ಬನಶಂಕರಿ ಬಳಿ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ವಿದೇಶಿ ಮೂಲದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ, ಸುಮಾರು 6 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ಸೀಜ್ ಮಾಡಲಾಗಿದೆ.
ವಿದೇಶಿಗರ ಬಂಧನ
ಕಬಂಗ್ ಮಸೇಬ್, ಜಾನ್ ಪೌಲ್ ಬಂಧಿತ ವಿದೇಶಿ ಆರೋಪಿಗಳು. ಇವರಿಂದ 6 ಲಕ್ಷ ಮೌಲ್ಯದ 96 LSD ಹಾಗೂ 39 ಗ್ರಾಂ MDMA ವಶಕ್ಕೆ ಪಡೆಯಲಾಗಿದೆ. ಸದ್ಯಕ್ಕೆ ಇವರಿಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಇವರು ಎಲ್ಲಿಂದ ಬಂದಿದ್ದಾರೆ, ಇವರ ಮೂಲ ಯಾವುದು ಎಂಬಿತ್ಯಾದಿ ವಿಚಾರಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ವಿಚಾರಣೆಗೆ ಒಳಪಡಿಸಿದ್ದಾರೆ.
ಇದನ್ನೂ ಓದಿ:ಸೀರೆಯುಟ್ಟು ಸ್ಟಂಟ್ ಮಾಡಿದ ಮಹಿಳೆ.. ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ..!