ಬೆಂಗಳೂರು:ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಹಾಗೂ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದು, ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಒಲ್ಡ್ ಏರ್ಪೋರ್ಟ್ ಸಂಚಾರ ಠಾಣೆ ವ್ಯಾಪ್ತಿಯ ಮಾರತ್ತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ.
ತಮಿಳುನಾಡು ಮೂಲದ ಶಿವಕುಮಾರ್ ಎಂಬುವರು ಕೆ.ಆರ್.ಪುರದಿಂದ ಪತ್ನಿ ಶ್ರೀದೇವಿ ಹಾಗೂ ಮಗು ದೀಕ್ಷಿತ್ನೊಂದಿಗೆ ತಮಿಳುನಾಡಿನ ಧರ್ಮಪುರಿಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರತ್ತಹಳ್ಳಿ ಹೊರ ವರ್ತುಲ ರಸ್ತೆ ಬಳಿ ಹಿಂಬದಿಯಿಂದ ಬೈಕ್ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶ್ರೀದೇವಿ (21) ಹಾಗೂ ದೀಕ್ಷಿತ್ ಸ್ಥಳದಲ್ಲೇ ಅಸುನೀಗಿದ್ದಾರೆ. ಟಿಪ್ಪರ್ ಚಾಲಕನ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.