ಬೆಂಗಳೂರು: ರಾಜ್ಯದಲ್ಲಿ ಎರಡು ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರಿನ ಮಡಿವಾಳ ಮೂಲದ ಪತಿ, ಪತ್ನಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಪತಿಗೆ 68 ವರ್ಷ ವಯಸ್ಸಾಗಿದ್ದು, ಪತ್ನಿಗೆ 62 ವರ್ಷ ವಯಸ್ಸಾಗಿದೆ.
ಬೆಂಗಳೂರಿನ ದಂಪತಿಯಲ್ಲಿ ಪತ್ತೆಯಾಯ್ತು ಕೊರೊನಾ: ರಾಜ್ಯದಲ್ಲಿ ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ - ಕೊರೊನಾ ಕರ್ನಾಟಕ
ರಾಜ್ಯದಲ್ಲಿ ಹೊಸದಾಗಿ ಎರಡು ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, ಬೆಂಗಳೂರಿನ ದಂಪತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 146ಕ್ಕೆ ಏರಿಕೆಯಾಗಿದೆ.
ಕೊರೊನಾ
ಮಾರ್ಚ್ 22ರಂದು ದಂಪತಿ ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದರು ಎಂದು ರಾಜ್ಯ ಆರೋಗ್ಯ ಇಲಾಖೆ ತನ್ನ ಹೆಲ್ತ್ ಬುಲೆಟಿನ್ನಿಂದ ಸ್ಪಷ್ಟಪಡಿಸಿದೆ. ಇದರಿಂದ ರಾಜ್ಯದಲ್ಲಿ 144 ಇದ್ದ ಕೊರೊನಾ ಪೀಡಿತರ ಸಂಖ್ಯೆ 146ಕ್ಕೆ ಏರಿಕೆಯಾಗಿದೆ. ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ.
Last Updated : Apr 5, 2020, 4:18 PM IST