ಬೆಂಗಳೂರು :ವಾರಾಂತ್ಯದಲ್ಲಿ ಕಾಲೇಜು ವಿದ್ಯಾರ್ಥಿಗಳು, ಉದ್ಯಮಿಗಳಿಗೆ ಸರಬರಾಜು ಮಾಡಲು ವಿವಿಧ ಮಾದಕ ಪದಾರ್ಥ ಸಂಗ್ರಹಿಸಿಟ್ಟಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಬಂಧಿತರನ್ನ ನೈಜೀರಿಯಾ ಮೂಲದ ಕ್ರಿಸ್ಟಿಯನ್ ಇಯ್ಕ್ ಚುಕ್ವು ಹಾಗೂ ಜಾನ್ ಓಬಿನಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪುಲಿಕೇಶಿನಗರದ ಮನೆಯೊಂದರಲ್ಲಿ ವಾಸವಿದ್ದ ಆರೋಪಿಗಳು ಗಿರಾಕಿಗಳಿಗೆ ಸರಬರಾಜು ಮಾಡಲು ವಿವಿಧ ಮಾತ್ರೆಗಳನ್ನು ಶೇಖರಿಸಿ ಇಟ್ಟುಕೊಂಡಿದ್ದರು.