ಆನೇಕಲ್:ಇಲ್ಲಿನ ಅತ್ತಿಬೆಲೆ-ಟಿವಿಎಸ್ ರಸ್ತೆಯಲ್ಲಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಘಟನೆ ನಿನ್ನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಕೊಲೆಯಾದವರನ್ನು ಅತ್ತಿಬೆಲೆಯ ದೀಪಕ್ ಹಾಗೂ ಮಾಯಸಂದ್ರದ ಬಾಸ್ಕರ್ ಎಂದು ಗುರುತಿಸಲಾಗಿದೆ. ಹಣಕಾಸಿನ ವ್ಯವಹಾರದಲ್ಲಿ ಗಲಾಟೆ ನಡೆದು ಮತ್ತೊಂದು ಕಡೆಯವರು ಈ ಇಬ್ಬರನ್ನು ಅಟ್ಟಾಡಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.