ಬೆಂಗಳೂರು:ಮಡಿವಾಳ ಠಾಣೆಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಪೊಲೀಸ್ ಠಾಣೆಗೆ ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಸಿಬ್ಬಂದಿಗೆ ತಾತ್ಕಾಲಿಕವಾಗಿ ರಜೆ ನೀಡಲಾಗಿದೆ.
ಎಂದಿನಂತೆ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕಿರುವುದು ಗೊತ್ತಾಗಿದೆ. ಸೋಂಕು ಪತ್ತೆಯಾಗುತ್ತಿದ್ದಂತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕಾನ್ಸ್ಟೇಬಲ್ ಉಳಿದುಕೊಂಡಿದ್ದ ಮಡಿವಾಳ ಪೊಲೀಸ್ ಕ್ವಾಟ್ರಸ್ಗೂ ಸ್ಯಾನಿಟೈಸ್ ಮಾಡಲಾಗಿದೆ.
ಸುದ್ದುಗುಂಟೆಪಾಳ್ಯ ಠಾಣಾ ಸಿಬ್ಬಂದಿಗೂ ಸೋಂಕು
ನಗರದ ಸುದ್ದುಗುಂಟೆಪಾಳ್ಯ ಠಾಣೆಯ ಸಿಬ್ಬಂದಿಗೆ ಸ್ವ್ಯಾಬ್ ಟೆಸ್ಟ್ ಮಾಡಿಸಿದಾಗ ಕೊರೊನಾ ಇರುವುದು ಪತ್ತೆಯಾಗಿದೆ. ಜ್ಚರದಿಂದ ಬಳಲುತ್ತಿದ್ದ ಸಿಬ್ಬಂದಿಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಕರೊನಾ ಪರೀಕ್ಷೆಗೆ ಒಳಗಾಗುವಂತೆ ಸೂಚಿಸಿದ್ದರು.
ಇದರಂತೆ ಪರೀಕ್ಷೆಗೆ ಒಳಪಡಿಸಿದಾಗ ಕೊರೊನಾ ಇರುವುದು ದೃಢವಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲು ಸಿದ್ಧತೆ ಮಾಡಲಾಗುತ್ತಿದೆ. ಸಿಬ್ಬಂದಿಯ ಜೊತೆ ಪ್ರಾಥಮಿಕ ಸಂಪರ್ಕದಲ್ಲಿವರಿಗೆ ಕ್ವಾರಂಟೈನ್ ಮಾಡಲು ಬಿಬಿಎಂಪಿ ಮುಂದಾಗಿದೆ.
ಪೊಲೀಸ್ ಠಾಣೆ ಸ್ಯಾನಿಟೈಸ್ ನಗರ ಪೊಲೀಸ್ ಇಲಾಖೆಯಲ್ಲಿ ಈವರೆಗೂ 120ಕ್ಕೂ ಅಧಿಕ ಪೊಲೀಸರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ.