ಬೆಂಗಳೂರು: ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ 2018ನೇ ಸಾಲಿನ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪಟ್ಟಿ ಪ್ರಕಟಿಸಿದೆ. ಈ ಪ್ರಶಸ್ತಿಗೆ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ರಾಜ್ಯದ ಇಬ್ಬರು ಶಿಕ್ಷಕರು ರಾಷ್ಟ್ರ ಪ್ರಶಸ್ತಿಗೆ ಆಯ್ಕೆ - National Award for 2018
ಕೇಂದ್ರ ಮಾನವ ಸಂಪನ್ಮೂಲ ಇಲಾಖೆಯು ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡುವ ರಾಷ್ಟ್ರ ಪ್ರಶಸ್ತಿಗೆ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ.
ರಾಷ್ಟ್ರ ಪ್ರಶಸ್ತಿಗೆ ರಾಜ್ಯದ ಇಬ್ಬರು ಶಿಕ್ಷಕರು ಆಯ್ಕೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಶಶಿಕುಮಾರ್.ಬಿ.ಎಸ್ ಮತ್ತು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಬೆಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸುರೇಶ ಮರಕಾಲ ಆಯ್ಕೆಯಾಗಿದ್ದಾರೆ.