ಬೆಂಗಳೂರು: ಗಸ್ತು ತಿರುಗುತ್ತಿದ್ದ ವೇಳೆ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ಇಬ್ಬರು ಚಾಲಾಕಿ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಸಯ್ಯದ್ ರಫೀಕ್, ಕಾರ್ತಿಕ್ ಬಂಧಿತರು. ಆರೋಪಿಗಳಿಂದ ಆರು ಲಕ್ಷ ಬೆಲೆ ಬಾಳುವ 105 ಗ್ರಾಂ ಚಿನ್ನಾಭರಣ, 2 ದ್ವಿಚಕ್ರ ವಾಹನ ಮತ್ತು ನಗದು ವಶಪಡಿಸಿಕೊಳ್ಳಲಾಗಿದೆ.
ಪೊಲೀಸರು ಗಸ್ತಿನಲ್ಲಿರಬೇಕಾದರೆ ಅನುಮಾನಾಸ್ಪದ ರೀತಿಯಲ್ಲಿ ಇವರಿಬ್ಬರು ತಿರುಗಾಡುತ್ತಿದ್ದರು. ಈ ವೇಳೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯವನ್ನು ಬಾಯ್ಬಿಟ್ಟಿದ್ದರು.