ಬೆಂಗಳೂರು:ಸ್ಯಾಂಡಲ್ವುಡ್ಗೆಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣ: ಮತ್ತಿಬ್ಬರನ್ನು ವಶಕ್ಕೆ ಪಡೆದ ಸಿಸಿಬಿ - Bengaluru Drug link case
ನಟಿ ಸಂಜನಾ ಗಲ್ರಾನಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂದು ಹೇಳಲಾಗ್ತಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ಸಂಜನಾ ಗಲ್ರಾನಿ ಆಪ್ತರು ಎಂದು ಹೇಳಲಾಗುತ್ತಿರುವ ಜೋಯೆಬ್ ಮತ್ತು ಆನಂದ್ ಎಂಬುವರನ್ನು ಸಿಸಿಬಿ ವಿಚಾರಣೆಗೊಳಪಡಿಸಿದೆ. ಡ್ರಗ್ಸ್ ಡೀಲಿಂಗ್ ಆರೋಪ ಹೊತ್ತಿರುವ ಜೊಯೇಬ್, ನಟಿ ಸಂಜನಾಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಎನ್ನಲಾಗುತ್ತಿದೆ.
ನಗರದ ದೂಪನಹಳ್ಳಿಯ ಬಸ್ ನಿಲ್ದಾಣದ ಬಳಿ ಪೆಡ್ಲರ್ಗಳಿಂದ ಡ್ರಗ್ಸ್ ಪಡೆದುಕೊಂಡು, ಅದನ್ನು ಸಂಜನಾಗೆ ತಲುಪಿಸುತ್ತಿದ್ದನಂತೆ. ಅಲ್ಲದೆ ಸಂಜನಾ ಮತ್ತು ಜೋಯೆಬ್ ಬಿಟ್ ಕಾಯಿನ್ ಬಗ್ಗೆಯೂ ಚರ್ಚೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಜೋಯೆಬ್ ಜೊತೆ ಆನಂದ್ ಕೂಡ ಡ್ರಗ್ಸ್ ಡೀಲಿಂಗ್ ಮಾಡುತ್ತಿದ್ದ ಎಂದು ಹೇಳಲಾಗ್ತಿದೆ. ಹೀಗಾಗಿ ಇಬ್ಬರನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.