ಬೆಂಗಳೂರು:ಗೃಹಸಚಿವ ಆರಗ ಜ್ಞಾನೇಂದ್ರ ಹಾಗು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ರಾಜೀನಾಮೆಗೆ ವಿಧಾನಸಭೆ ಕಾಂಗ್ರೆಸ್ ಉಪನಾಯಕ ಯು. ಟಿ ಖಾದರ್ ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರ ಜೊತೆ ಮಾತನಾಡಿ, ಶಿವಮೊಗ್ಗ ಘಟನೆಯನ್ನ ತೀವ್ರವಾಗಿ ಖಂಡಿಸುತ್ತೇವೆ. ಈಶ್ವರಪ್ಪ ಆಧಾರ ರಹಿತವಾಗಿ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಮೇಲೆ ಆರೋಪ ಮಾಡಿದ್ದಾರೆ. ಇಂಟೆಲಿಜೆನ್ಸ್ ಏನು ಮಾಡುತ್ತಿದೆ. ಇದು ರಾಜ್ಯ ಸರ್ಕಾರಕ್ಕೆ ಗೊತ್ತಾಗಲೇ ಇಲ್ಲವಾ ?. ಯಾರು ತಪ್ಪು ಮಾಡಿದ್ದಾರೋ ಅವರನ್ನ ಪತ್ತೆ ಹಚ್ಚಿ ಶಿಕ್ಷಿಸಲಿ. ನಿರ್ದಿಷ್ಟ ಸಮುದಾಯದ ಮೇಲೆ ಈಶ್ವರಪ್ಪ ಆರೋಪ ಮಾಡಿದ್ದಾರೆ. ಇದು ಸರಿಯಲ್ಲ ಎಂದರು.