ಬೆಂಗಳೂರು: ಯುಜಿ ಸಿಇಟಿ-2020 ರ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆ ಮುಂದೂಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಜೆಇಇ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳ ಮನವಿಯನ್ನು ಗಣನೆಗೆ ತೆಗೆದುಕೊಂಡು ಇಂದಿನಿಂದ ಪ್ರಾರಂಭವಾಗಬೇಕಿದ್ದ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆಯನ್ನು ಸೆಪ್ಟೆಂಬರ್ 6ರವರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಯುಜಿ ಸಿಇಟಿ 2020ಕ್ಕೆ ದಾಖಲೆ ಸಲ್ಲಿಸಲು ಪರಿಷ್ಕತ ವೇಳಾಪಟ್ಟಿಯನ್ನು ಸೆಪ್ಟೆಂಬರ್ 5ರಂದು ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗುತ್ತು. ಪರಿಷ್ಕೃತ ವೇಳಾಪಟ್ಟಿಯಂತೆ ಅಭ್ಯರ್ಥಿಗಳು ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದು, ದಾಖಲಾತಿ ಪರಿಶೀಲನೆಗೆ ಯಾವುದೇ ಸಹಾಯಕ ಕೇಂದ್ರಗಳು ಅಥವಾ ಬೆಂಗಳೂರು ಕಚೇರಿಗೆ ಬರುವಂತಹ ಅಗತ್ಯತೆ ಇರುವುದಿಲ್ಲ ಎಂದು ತಿಳಿಸಿದೆ.