ಬೆಂಗಳೂರು:ವಿಧಾನಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದ್ದು, ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ ಡಿಸಿಎಂ ಜಿ. ಪರಮೇಶ್ವರ್, ಮಾಜಿ ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ವಿಧಾನಪರಿಷತ್ ಮುಖ್ಯಸಚೇತಕ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಲವು ಶಾಸಕರು ಸಭೆಗೆ ಆಗಮಿಸಿದ್ದಾರೆ.
ವಿವಿಧ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಶಾಸಕಾಂಗ ಸಭೆ ಕರೆಯಲಾಗಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಸಭೆ ನಡೆಯುವ ಸಾಧ್ಯತೆ ಇದೆ. ಬೆಳಗ್ಗೆ 11 ಗಂಟೆಗೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿರುವ ಹಿನ್ನೆಲೆ 10.30 ರ ಒಳಗೆ ಶಾಸಕಾಂಗ ಸಭೆ ಪೂರ್ಣಗೊಳಿಸಬೇಕಾಗಿದೆ.