ಬೆಂಗಳೂರು : ಪದವಿಪೂರ್ವ ಕಾಲೇಜುಗಳು ಆರಂಭವಾಗಿಲ್ಲದಿದ್ದರೂ, ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲು ಉಪನ್ಯಾಸಕರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಹಾಜರಿರಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಉಪನ್ಯಾಸಕರು ಹಾಗೂ ಸಿಬ್ಬಂದಿ ರಜಾದಿನ ಹೊರತುಪಡಿಸಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಿರಬೇಕೆಂದು ಎಂದು ತಿಳಿಸಿದೆ. ಫ್ರೀ ರೆಕಾರ್ಡ್ ಯೂ ಟ್ಯೂಬ್ ತರಗತಿಗಳನ್ನು ಇನ್ನೂ ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಸಂಪೂರ್ಣ ಜವಾಬ್ದಾರಿ ಉಪನ್ಯಾಸಕರದ್ದು. ಈ ನಿರ್ದೇಶನವನ್ನು ಪಾಲಿಸದ ಬಗ್ಗೆ ದೂರು ಬಂದರೆ ಸಂಬಂಧಿಸಿದ ಕಾಲೇಜುಗಳ ಪ್ರಾಂಶುಪಾಲರನ್ನು ಮತ್ತು ಆಯಾ ಜಿಲ್ಲಾ ಉಪನಿರ್ದೇಶಕರನ್ನು ಹೊಣೆ ಮಾಡಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.