ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ಹಿಂಭಾಗದಲ್ಲಿರುವ ಬಹುಮಹಡಿ ಕಟ್ಟಡ (ಎಂ ಎಸ್ ಬಿಲ್ಡಿಂಗ್) ನ ಸಂಪ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಶವ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಪೈಪ್ ಮೂಲಕ ಸಂಪ್ನ ಒಳಗಿನ ನೀರು ತೆಗೆದು ಮೃತದೇಹ ಹೊರತೆಗೆದಿದ್ದಾರೆ. ಸ್ಥಳಕ್ಕೆ ವಿಧಾನಸೌಧ ಪೊಲೀಸರು, ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಎಂ ಎಸ್ ಬಿಲ್ಡಿಂಗ್ ನೀರಿನ ಸಂಪ್ನಲ್ಲಿ ಪುರುಷನ ಮೃತದೇಹ ಪತ್ತೆ - ಕೇಂದ್ರ ವಿಭಾಗ ಡಿಸಿಪಿ ಶ್ರೀನಿವಾಸ್ ಗೌಡ
ಅಗ್ನಿಶಾಮಕ ವ್ಯವಸ್ಥೆ ನಿರ್ವಹಣೆಯ ಪಂಪ್ ಹೌಸ್ ಸಮೀಪದ ಸಂಪ್ನಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ.
ಎಂ ಎಸ್ ಬಿಲ್ಡಿಂಗ್
ಮೂರು ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆಯಿದ್ದು, ಮೃತನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ