ಬೆಂಗಳೂರು:ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿಯೇ ಬೆಂಗಳೂರಿಗೆ ಆಗಮಿಸುತ್ತಿದ್ದು, ನಾಳೆ ಇಡೀ ದಿನ ಬಿಡುವಿಲ್ಲದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ಬಸವ ಜಯಂತಿಗೆ ಚಾಲನೆ ನೀಡಲಿದ್ದು, 10.30ಕ್ಕೆ ನೃಪತುಂಗ ರಸ್ತೆಯಲ್ಲಿ ನೃಪತುಂಗ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಹಾಗೂ ಬಳ್ಳಾರಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವರ್ಚುಯಲ್ ಮೂಲಕ ಚಾಲನೆ ನೀಡಲಿದ್ದಾರೆ. ಅಪರಾಹ್ನ 12 ಗಂಟೆಗೆ ಯಲಹಂಕದ ಎನ್ಎಟಿಜಿಆರ್‌ಡಿ ಡಿಆರ್‌ಸಿ ಕೇಂದ್ರದ ಉದ್ಘಾಟನೆ ನೆರವೇರಿಸಲಿದ್ದಾರೆ.