ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಾಡಿರುವ ಆರೋಪಗಳಿಗೆ ಉತ್ತರಿಸಲು ಇದು ಸಕಾಲವಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಆರೋಪಗಳಿಗೆ ಉತ್ತರಿಸಲು ಸಕಾಲ ಅಲ್ಲ: ಸಿದ್ದು ಆರೋಪಕ್ಕೆ ಹೆಚ್ಡಿಕೆ ಪರೋಕ್ಷ ಟಾಂಗ್ - ರಾಜಕೀಯ ವಿದ್ಯಮಾನಗಳು
ಆರೋಪಗಳಿಗೆ ಉತ್ತರಿಸಲು ಸಕಾಲ ಅಲ್ಲ. ಏಕರೂಪದ ರಾಜಕೀಯ ವಿದ್ಯಮಾನಗಳ ನಡುವೆ ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಿದೆ ಎಂದು ಒಗ್ಗಟ್ಟಿನ ಜಪದ ಜತೆಗೆ ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಹಾಗೂ ಹೆಚ್ಡಿಕೆ
ದೇಶದ ರಾಜಕೀಯ ವಿದ್ಯಮಾನಗಳು ಏಕರೂಪವಾಗಿವೆ. ಜಾತ್ಯತೀತ ಶಕ್ತಿಗಳು ಒಗ್ಗೂಡಬೇಕಾದ ಇಂತಹ ಸಂದರ್ಭದಲ್ಲಿ ಒಡಕಿನ ಮಾತುಗಳು ಆರೋಗ್ಯಕರವಲ್ಲ ಎಂದು ತಮ್ಮ ಒಗ್ಗಟ್ಟಿನ ಮಾತುಗಳನ್ನು ಜಪಿಸಿದ್ದಾರೆ.
ಕಾಲ ಕೂಡಿ ಬಂದಾಗ ಖಂಡಿತ ಎಲ್ಲದಕ್ಕೂ ಉತ್ತರಿಸುವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ.