ಆನೇಕಲ್ : ವ್ಯಕ್ತಿಯೊಬ್ಬನನ್ನು ಅಜ್ಞಾತ ಸ್ಥಳದಲ್ಲಿ ಕೊಲೆ ಮಾಡಿ ನಂತರ ರಸ್ತೆಯಲ್ಲಿ ಎಸೆದು ಹೋಗಿರುವ ಘಟನೆ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ನಡೆದಿದೆ.
ಆನೇಕಲ್ : ಅಪರಿಚಿತ ವ್ಯಕ್ತಿಯನ್ನ ಕೊಲೆ ಮಾಡಿ ರಸ್ತೆಯಲ್ಲಿ ಬಿಸಾಡಿದ ದುಷ್ಕರ್ಮಿಗಳು - ಆನೇಕಲ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಕೊಲೆಯಾದ ವ್ಯಕ್ತಿ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ. ಸುಮಾರು 25 ರಿಂದ 30ರ ಆಸುಪಾಸಿನ ವಯಸ್ಸಿನವರು ಎಂದು ಗುರುತಿಸಲಾಗಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ..
ಆನೇಕಲ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮೊದಲೇ ಬೇರೊಂದು ಸ್ಥಳದಲ್ಲಿ ವ್ಯಕ್ತಿಯನ್ನ ಕೊಲೆ ಮಾಡಲಾಗಿದೆ. ನಂತರ ಆತನನ್ನು ಬೊಮ್ಮಸಂದ್ರದ ಕೆಐಎಡಿಬಿ ಕ್ವಾಟ್ರಸ್ ಬಳಿ ಶವವನ್ನು ಎಸೆದು ಹೋಗಲಾಗಿದೆ ಎನ್ನಲಾಗಿದೆ. ಇಂದು ಬೆಳಗ್ಗೆ ವ್ಯಕ್ತಿಯ ಶವ ಪತ್ತೆಯಾಗಿದ್ದು, ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ. ಸುಮಾರು 25 ರಿಂದ 30ರ ಆಸುಪಾಸಿನ ವಯಸ್ಸಿನವರು ಎಂದು ಗುರುತಿಸಲಾಗಿದೆ. ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.