ಬೆಂಗಳೂರು:ಇಲ್ಲಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಸುನೀಲ್ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬ್ಯಾಟರಾಯನಪುರದ ಕಸ್ತೂರಿ ನಗರದಲ್ಲಿ ದುಷ್ಕರ್ಮಿಗಳು ಸುನೀಲ್ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.