ಕರ್ನಾಟಕ

karnataka

ETV Bharat / state

ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ದೊಡ್ಡಬಳ್ಳಾಪುರ ಸುದ್ದಿ ಅಪರಿಚಿತ ಶವ ಪತ್ತೆ

ದೊಡ್ಡಬಳ್ಳಾಪುರ ನಗರದ ಸರ್ಕಾರಿ ಆಸ್ಪತ್ರೆಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

unkown person deadboady found
ಅಪರಿಚಿತ ಶವ ಪತ್ತೆ

By

Published : Dec 19, 2019, 10:30 PM IST

ದೊಡ್ಡಬಳ್ಳಾಪುರ:ನಗರದ ಸರ್ಕಾರಿ ಆಸ್ಪತ್ರೆಯ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲೆಂದು ಬಂದಿದ್ದ ಸಮಯದಲ್ಲಿ ಆತ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಅಂದಾಜು 55 ವರ್ಷದ ವ್ಯಕ್ತಿಯಾಗಿದ್ದು, 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಬಣ್ಣ, ದುಂಡು ಮುಖ ಹೊಂದಿದ್ದಾನೆ.

ಇನ್ನು, ಮೃತದೇಹ ವಾರಸ್ಧಾರರು ಇದ್ದಲ್ಲಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details