ಕರ್ನಾಟಕ

karnataka

ETV Bharat / state

ನ.10ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ : ಸ್ಥಳ ಪರಿಶೀಲನೆ ನಡೆಸಿದ ಸಚಿವ - ಈಟಿವಿ ಭಾರತ ಕನ್ನಡ

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸ್ಥಾಪಿಸಲಾಗಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ನ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ.

unveiling-of-kempegowda-statue-at-devanahalli-airport-on-november-10
ನ.10ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ : ಸ್ಥಳ ಪರಿಶೀಲನೆ ನಡೆಸಿದ ಸಚಿವ

By

Published : Oct 8, 2022, 5:39 PM IST

ದೇವನಹಳ್ಳಿ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನವೆಂಬರ್ 10ರಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.

ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದು, ಬೃಹತ್ ಸಾರ್ವಜನಿಕ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ಕೆಂಪೇಗೌಡರ ಪ್ರತಿಮೆಯ ಸಮೀಪವೇ ಇರುವ ಸುಮಾರು 30 ಎಕರೆ ಪ್ರದೇಶದಲ್ಲಿ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ.

ನ.10ಕ್ಕೆ ಪ್ರಧಾನಿ ಮೋದಿಯಿಂದ ಕೆಂಪೇಗೌಡ ಪ್ರತಿಮೆ ಲೋಕಾರ್ಪಣೆ : ಸ್ಥಳ ಪರಿಶೀಲನೆ ನಡೆಸಿದ ಸಚಿವ

ಕಾರ್ಯಕ್ರಮದ ಸಿದ್ದತೆ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥನಾರಾಯಣ ಸ್ಥಳ ಪರಿಶೀಲನೆ ನಡೆಸಿದರು. ಮೋದಿ ಅವರ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಜನರು ಬರಲಿದ್ದು, ಸೂಕ್ತ ಬಂದೋಬಸ್ತ್ ಮತ್ತು ವಾಹನ ನಿಲುಗಡೆ ಸೇರಿದಂತೆ ಸಕಲ ವ್ಯವಸ್ಥೆಯನ್ನೂ ಮಾಡಲಾಗುತ್ತದೆ. ನಗರದಲ್ಲಿ ಬೇರಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಇದೇ ವೇಳೆ ತಿಳಿಸಿದರು.

ಇದನ್ನೂ ಓದಿ :ಸಿದ್ದರಾಮಯ್ಯಗೆ ಅದ್ಯಾಕೋ ಒಡೆಯರ್ ಹೆಸರು ಬೇಸರ ತರಿಸಿತೋ ಗೊತ್ತಿಲ್ಲ: ಎನ್ ರವಿಕುಮಾರ್

ABOUT THE AUTHOR

...view details