ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಎಂ ಬೊಮ್ಮಾಯಿ ಸರ್ಕಾರಿ ನಿವಾಸಕ್ಕೆ ನಿನ್ನೆ ಸಂಜೆ ಭೇಟಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಸಂಸ್ಥೆ ವತಿಯಿಂದ ನೆಲಮಂಗಲ ತಾಲೂಕಿನ ಮಹದೇವಪುರದಲ್ಲಿ ನೂತನವಾಗಿ ನಿರ್ಮಿಸಿರುವ ಕ್ಷೇಮವನ ಪ್ರಕೃತಿ ಚಿಕಿತ್ಸಾ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೂಡಿ ಯೋಗಿ ಆದಿತ್ಯನಾಥ್ ಅವರು ರೇಸ್ ಕೋರ್ಸ್ ನಿವಾಸಕ್ಕೆ ಆಗಮಿಸಿದರು. ಸಚಿವರಾದ ಅಶ್ವತ್ಥ್ ನಾರಾಯಣ್, ಸಿ.ಸಿ ಪಾಟೀಲ್, ರಾಜ್ಯಸಭಾ ಸದಸ್ಯರಾದ ಜಗ್ಗೇಶ್, ಲೆಹರ್ ಸಿಂಗ್ ಸೇರಿದಂತೆ ಕೆಲ ಸಂಸದರು, ಶಾಸಕರು ಉಪಸ್ಥಿತರಿದ್ದರು. ಇದೇ ಸಂದರ್ಭ ಸಿಎಂ ಪತ್ನಿ ಹಾಗೂ ಕುಟುಂಬಸ್ಥರು ಯೋಗಿ ಆದಿತ್ಯನಾಥ್ ಜೊತೆ ಫೋಟೋ ತೆಗೆಸಿಕೊಂಡರು.