ಬೆಂಗಳೂರು:ನಟನೆಯಿಂದ ರಾಜಕೀಯಕ್ಕೆ ಧುಮುಕಿರುವ ರಿಯಲ್ಸ್ಟಾರ್ ಉಪೇಂದ್ರ ಉತ್ತಮ ಪ್ರಜಾಕೀಯ ಪಕ್ಷದ ಮೂಲಕ ಸಮಾಜದಲ್ಲಿ ಬದಲಾವಣೆ ತರುವ ಹುಮ್ಮಸ್ಸಿನಲ್ಲಿದ್ದಾರೆ.
ಉಪ್ಪಿ ಪಕ್ಷದ ಅಭ್ಯರ್ಥಿಗಳ ಘೋಷಣೆ ನಾಳೆ... ಚಮಕ್ ನೀಡ್ತಾರಾ ರಿಯಲ್ಸ್ಟಾರ್ - Realstar
11 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿರುವ ಉಪ್ಪಿ ಇದೇ ವೇಳೆ 14 ಲೋಕಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.

ಉಪೇಂದ್ರ
ಲೋಕಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ನಟ ಉಪೇಂದ್ರ ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಘೋಷಣೆ ಮಾಡುವುದಾಗಿ ಟ್ವಿಟರ್ನಲ್ಲಿ ಹೇಳಿದ್ದಾರೆ. 11 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿರುವ ಉಪ್ಪಿ ಇದೇ ವೇಳೆ 14 ಲೋಕಸಭಾ ಕ್ಷೇತ್ರಗಳಿಗೆ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಎಪ್ರಿಲ್ 18 ಹಾಗೂ 23ರಂದು ಎರಡು ಹಂತದಲ್ಲಿ ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಮುಕ್ತಾಯವಾಗಿದೆ.