ಬೆಂಗಳೂರು : ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆ ಆರೋಗ್ಯ ಇಲಾಖೆ ವೈದ್ಯರಿಗೆ, ಸಿಬ್ಬಂದಿಗೆ ಸುತ್ತೋಲೆ ಹೊರಡಿಸಿದೆ. ಆಗಸ್ಟ್ 15ರವರೆಗೆ ಸಾಂದರ್ಭಿಕ ರಜೆ ಆಗಲೀ, ಸಾರ್ವತ್ರಿಕ ರಜೆಗಯಾಲೀ ತೆಗೆದುಕೊಳ್ಳದಂತೆ, ವೈದ್ಯರಿಗೆ, ಸಿಬ್ಬಂದಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಉತ್ತರ ಕರ್ನಾಟಕದಲ್ಲಿ ನೆರೆ : ವೈದ್ಯರಿಗಿಲ್ಲ ರಜೆ - ವೈದ್ಯರಿಗೆ ರಜೆ ಇಲ್ಲ
ಉತ್ತರ ಕರ್ನಾಟಕದಲ್ಲಿ ನೆರೆ ಪರಿಸ್ಥಿತಿ ಹಿನ್ನೆಲೆ ಆರೋಗ್ಯ ಇಲಾಖೆ ವೈದ್ಯರಿಗೆ, ಸಿಬ್ಬಂದಿಗಳಿಗೆ ಸುತ್ತೋಲೆ ಹೊರಡಿಸಿದೆ. ಆಗಸ್ಟ್ 15ರವರೆಗೆ ಸಾಂದರ್ಭಿಕ ರಜೆ ಆಗಲೀ, ಸಾರ್ವತ್ರಿಕ ರಜೆಗಯಾಲೀ ತೆಗೆದುಕೊಳ್ಳದಂತೆ, ವೈದ್ಯರಿಗೆ, ಸಿಬ್ಬಂದಿಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ತೀವ್ರ ನೆರೆಹಾವಳಿ ತುತ್ತಾಗಿರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಗದಗ, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೀದರ್, ಬೆಳಗಾವಿ, ಚಿಕ್ಕೋಡಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ, ಕೊಪ್ಪಳ ಧಾರವಾಡ, ಬಳ್ಳಾರಿ, ಹಾಸನ, ಉಡುಪಿ ಹಾಗೂ ಕಲಬುರ್ಗಿ ಜಿಲ್ಲೆಗಳಲ್ಲಿ ನೆರೆಹಾವಳಿಯಾಗಿದೆ.
ಈ ಪ್ರದೇಶಗಳಲ್ಲಿ ಪರಿಸ್ಥಿತಿ ಸುಧಾರಿಸುವವರೆಗೆ ಹಾಗೂ ಜಿಲ್ಲೆಯ ಜಿಲ್ಲಾಧಿಕಾರಿಗಳು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದಂತೆ ನಿರ್ಣಯಗಳನ್ನು ಕೈಗೊಳ್ಳುವವರೆಗೆ ಯಾವುದೇ ಅಧಿಕಾರಿ/ಸಿಬ್ಬಂದಿಗಳಿಗೆ ಆಗಸ್ಟ್ 9, 10, 11, 12 & 15 ನೇ ತಾರೀಕಿನವರೆಗೆ ನಿರ್ಬಂಧಿಯ ರಜೆ/ಸಾರ್ವತ್ರಿಕ ರಜವನ್ನೊಳಗೊಂಡಂತೆ, ಯಾವುದೇ ರೀತಿಯ ರಜೆಯನ್ನು ಮಂಜೂರು ಮಾಡಬಾರದೆಂದು ಸೂಚಿಸಿದೆ.