ಬೆಂಗಳೂರು:ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ ಹೈಕೋರ್ಟ್ ತೀರ್ಪು ನೀಡಿರುವ ಬಗ್ಗೆ ಗೊತ್ತಿಲ್ಲ, ಮಾಹಿತಿ ಪಡೆದುಕೊಂಡು ಪ್ರತಿಕ್ರಿಯೆ ನೀಡುವುದಾಗಿ ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ವಿಶ್ವನಾಥ್ಗೆ ಸಚಿವ ಸ್ಥಾನ ನೀಡದಂತೆ ಕೋರ್ಟ್ ತೀರ್ಪು: ಮಾಹಿತಿ ಪಡೆದು ಪ್ರತಿಕ್ರಿಯಿಸುವೆ ಎಂದ ಸೋಮಣ್ಣ - ಹೆಚ್ ವಿಶ್ವನಾಥ್ ಲೇಟೆಸ್ಟ್ ನ್ಯೂಸ್
ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಿಂದ ಸಂಪುಟ ವಿಸ್ತರಣೆ ವಿಳಂಬವಾಗಲಿದೆ ಎನ್ನಲು ಸಾಧ್ಯವಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ಸಚಿವ ವಿ.ಸೋಮಣ್ಣ, ಸಿಎಂ ಯಡಿಯೂರಪ್ಪ ಜೊತೆ ಕೆಲ ಕಾಲ ಮಾತುಕತೆ ನಡೆಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿ, ನಾಲ್ಕು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ಹೋಗುತ್ತಿದ್ದೇನೆ ಈ ವಿಚಾರವನ್ನೆ ಸಿಎಂ ಭೇಟಿ ಮಾಡಿ, ಮಾಹಿತಿ ಕೊಟ್ಟಿದ್ದೇನೆ ಎಂದರು.
ಹೆಚ್.ವಿಶ್ವನಾಥ್ಗೆ ಸಚಿವ ಸ್ಥಾನ ನೀಡದಂತೆ ಹೈಕೋರ್ಟ್ ತೀರ್ಪು ನೀಡಿರುವ ಬಗ್ಗೆ ಮಾಹಿತಿ ಪಡೆದು, ನಂತರ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ರು. ಇದೇ ವೇಳೆ, ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಿಂದ ಸಂಪುಟ ವಿಸ್ತರಣೆ ವಿಳಂಬವಾಗಲಿದೆ ಎನ್ನಲು ಸಾಧ್ಯವಿಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ ಆದರೆ ಇದು ಸಿಎಂ ಪರಮಾಧಿಕಾರ, ಸಿಎಂ ಇದ್ದಾರೆ, ಹೈಕಮಾಂಡ್ ನಾಯಕರಿದ್ದಾರೆ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.