ಬೆಂಗಳೂರು:ಇಂದಿನಿಂದ ನಾಲ್ಕನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಲಸಿಕೆ ವಿತರಣೆ ಆರಂಭವಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಇಂದಿನಿಂದ 5,500 ಕೇಂದ್ರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಚಿವ ಸುಧಾಕರ್ - ಸಚಿವ ಸುಧಾಕರ್,
ಇಂದಿನಿಂದ 5500 ಲಸಿಕಾ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.
![ಇಂದಿನಿಂದ 5,500 ಕೇಂದ್ರದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಸಚಿವ ಸುಧಾಕರ್ Vaccination for over 45 years old from today, Vaccination for over 45 years old tweeted Minister Sudhakar, Vaccination, Vaccination news, 45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ, ಬೆಂಗಳೂರಿನಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ, 45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ ಎಂದ ಸಚಿವ ಸುಧಾಕರ್, ಸಚಿವ ಸುಧಾಕರ್, ಸಚಿವ ಸುಧಾಕರ್ ಸುದ್ದಿ,](https://etvbharatimages.akamaized.net/etvbharat/prod-images/768-512-11235209-79-11235209-1617255903226.jpg)
ಸಂಗ್ರಹ ಚಿತ್ರ
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೂ ಲಸಿಕೆ ಲಭ್ಯವಾಗಲಿದ್ದು, 650 ಖಾಸಗಿ ಮತ್ತು 4850 ಸರ್ಕಾರಿ ಸೇರಿದಂತೆ ರಾಜ್ಯಾದ್ಯಂತ ಒಟ್ಟು 5,500 ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಹೇಳಿದ್ದಾರೆ.
ಬಿಬಿಎಂಪಿಗೆ 1.5 ಲಕ್ಷ ಡೋಸ್ ಲಸಿಕೆ ಪೂರೈಸಲಾಗಿದ್ದು, ಬೆಂಗಳೂರು ನಗರದಾದ್ಯಂತ ಸುಮಾರು 600 ಲಸಿಕಾ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಾಗುತ್ತಿದೆ ಎಂದು ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.