ಕರ್ನಾಟಕ

karnataka

ETV Bharat / state

ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯಪಾಲರ ಸಮ್ಮತಿ - ಚಳಿಗಾಲ ಅಧಿವೇಶನ

ಡಿಸೆಂಬರ್ 7ರಿಂದ ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್ ಚಳಿಗಾಲದ ಜಂಟಿ ಅಧಿವೇಶನ ನಡೆಸಲು ರಾಜ್ಯಪಾಲ ವಜುಭಾಯ್​ ವಾಲಾ ಅನುಮತಿ ನೀಡಿದ್ದಾರೆ.

ವಜುಭಾಯಿ ವಾಲಾ
ವಜುಭಾಯಿ ವಾಲಾ

By

Published : Nov 23, 2020, 10:27 PM IST

ಬೆಂಗಳೂರು: ಡಿಸೆಂಬರ್ 7ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯಪಾಲ ವಜುಭಾಯ್​ ವಾಲಾ ಸಮ್ಮತಿ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ಪರವಾಗಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದ್ದ ಮನವಿ ಪುರಸ್ಕರಿಸಿರುವ ಅವರು, ಡಿಸೆಂಬರ್ 7ರಿಂದ ರಾಜ್ಯ ವಿಧಾನಸಭೆ ಹಾಗೂ ವಿಧಾನ ಪರಿಷತ್ ಚಳಿಗಾಲದ ಜಂಟಿ ಅಧಿವೇಶನಕ್ಕೆ ತಮಗೆ ಇರುವ ಅಧಿಕಾರ ವ್ಯಾಪ್ತಿಯಲ್ಲಿ ಸಮಾವೇಶ ನಡೆಸಲು ಅನುಮತಿ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿಧೇಯಕ ಅಂಗೀಕಾರ, ಎಪಿಎಂಸಿ ತಿದ್ದುಪಡಿ ಕಾಯ್ದೆ ಅಂಗೀಕಾರ ಸೇರಿದಂತೆ ಹಲವು ಮಹತ್ವದ ಮಸೂದೆಗಳನ್ನು ಅಂಗೀಕರಿಸಲು ಬೇಕಿರುವ ಅನಿವಾರ್ಯತೆ ಎದುರಿಸುತ್ತಿರುವ ರಾಜ್ಯ ಸರ್ಕಾರ, ಡಿಸೆಂಬರ್ 7ರಿಂದ 15ರವರೆಗೆ ಬೆಂಗಳೂರಿನಲ್ಲಿ ಚಳಿಗಾಲದ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.

ಈ ತೀರ್ಮಾನವನ್ನು ರಾಜ್ಯಪಾಲ ವಜುಭಾಯ್​ ವಾಲಾರಿಗೆ ತಿಳಿಸಿದ್ದು, ಇದೀಗ ಉಭಯ ಸದನಗಳ ಅಧಿವೇಶನ ನಡೆಸಲು ರಾಜ್ಯಪಾಲರು ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಬೆಳಗ್ಗೆ 11ಕ್ಕೆ ಸಮಾವೇಶಗೊಳಿಸಿ ಎಂದು ಸೂಚಿಸಿದ್ದಾರೆ.

ABOUT THE AUTHOR

...view details