ಬೆಂಗಳೂರು:2011ರ 362 ಗೆಜೆಟೆಡ್ ಅಧಿಕಾರಿಗಳ ನೇಮಕವನ್ನು ಊರ್ಜಿತಗೊಳಿಸುವ ಕಾಯ್ದೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜಂಟಿ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕ್ಕೆ ರಾಜ್ಯಪಾಲರ ಅಂಕಿತ ಸಿಕ್ಕಿದ್ದು, ಇದೀಗ ಸರ್ಕಾರ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಅಧಿಸೂಚನೆ ಹೊರಡಿಸುವ ಮೂಲಕ ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ 2022ಗೆ ಜಾರಿಗೊಳಿಸಲಾಗಿದೆ. 2011 ನವೆಂಬರ್ 3 ರಂದು ಕರ್ನಾಟಕ ಲೋಕಸೇವಾ ಆಯೋಗ 362 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ಆದರೆ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಅಭ್ಯರ್ಥಿಗಳು ಕೆಪಿಎಸ್ಸಿ ಸದಸ್ಯರಿಗೆ ಲಂಚ ನೀಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಸಿಐಡಿ ತನಿಖೆ ನಡೆಸಿತ್ತು. ಅಲ್ಲಿಂದೀಚೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್, ಹೈ ಕೋರ್ಟ್ನಲ್ಲಿ ವಿಚಾರಣೆಗೊಳಗಾಗಿತ್ತು.
ಓದಿ:ಉಭಯ ದೇಶಗಳ ನಡುವೆ ಮಾತುಕತೆ ಮಧ್ಯೆಯೇ ಉಕ್ರೇನ್ ಮೇಲೆ ರಷ್ಯಾ ದಾಳಿ.. ನಾಗರಿಕರ ನರಳಾಟ, ನ್ಯಾಟೋ ಕೆರಳಿಸಿದ ರಷ್ಯಾ!