ಬೆಂಗಳೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಿಂದ ಕಾಲ್ನಡಿಗೆ ಜಾಥಾ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.
ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿ ಪಾದಯಾತ್ರೆ - undefined
ಪರಿಶಿಷ್ಟ ಪಂಗಡಕ್ಕೆ ಈಗಿರುವ ಶೇ. 3ರ ಮೀಸಲಾತಿಯನ್ನು ಶೇ. 7.5ಕ್ಕೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಪಾದಯಾತ್ರೆ ನಡೆಸುತ್ತಿದ್ದಾರೆ.
ಪಾದಯಾತ್ರೆ
ಪ್ರಮುಖವಾಗಿ ಪರಿಶಿಷ್ಟ ಪಂಗಡಕ್ಕೆ ಈಗಿರುವ ಶೇ. 3ರ ಮೀಸಲಾತಿಯನ್ನು ಶೇ. 7.5ಕ್ಕೆ ಏರಿಕೆ ಮಾಡಬೇಕೆಂದು ಆಗ್ರಹಿಸಿ ಪಾದಯಾತ್ರೆ ನಡೆಸುತ್ತಿದ್ದಾರೆ. 1956ರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಜಾರಿಗೊಳಿಸಲಾಗಿತ್ತು. ಆದರೆ ಈಗಿನ ಜನಸಂಖ್ಯೆಯನ್ನು ಆಧರಿಸಿದರೆ ಏನೇನು ಸಾಲದೆಂದು ಸ್ವಾಮೀಜಿ ಆಗ್ರಹಿಸಿದರು.
ಇನ್ನು ಇದೇ ತಿಂಗಳ 9ರಿಂದ ಹರಿಹರದಿಂದ ಆರಂಭಿಸಿದ ಪಾದಾಯಾತ್ರೆಯು ಇಂದು ಮಂಗಳವಾರ ಬೃಹತ್ ಪ್ರತಿಭಟನೆಯೊಂದಿಗೆ ಬೆಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ. ನೂರಾರು ಸಂಖ್ಯೆಯಲ್ಲಿನ ಸ್ವಾಮೀಜಿಗಳ ಅನುಯಾಯಿಗಳು ಹಾಗೂ ವಾಲ್ಮೀಕಿ ಸಮುದಾಯದವರು ಪಾದಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.