ಭವ್ಯ ಪರಂಪರೆ ಹೊಂದಿರುವ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳಾಗಿವೆ. ದೇಶದಾದ್ಯಂತ ಅಮೃತ ಮಹೋತ್ಸವವನ್ನು ಇಂದು ಅದ್ಧೂರಿಯಾಗಿ ಆಚರಿಸಲಾಗಿದೆ. ಈ ಸಂದರ್ಭದಲ್ಲಿ ವಂದೇ ಮಾತರಂ ಎಂಬ ಅದ್ಭುತ ಗೀತೆ ಬಿಡುಗಡೆಯಾಗಿದ್ದು, ನಾಡಿನ ಸಾಂಸ್ಕೃತಿಕ ರಂಗದ ಗಣ್ಯರ ಸಮಾಗಮದಲ್ಲಿ ಸೊಗಸಾಗಿ ಮೂಡಿಬಂದಿದೆ.
ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಈ ಹಾಡು ನಿರ್ಮಾಣ ಮಾಡಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶನವಿದೆ. ಪ್ರವೀಣ್ ಡಿ ರಾವ್ ಸಂಗೀತ ನೀಡಿದ್ದಾರೆ. ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಶ್ರೀಶ ಕುದವಳ್ಳಿ ಛಾಯಾಗ್ರಹಣವಿದೆ.
ಕಿಚ್ಚ ಸುದೀಪ, ಶಿವರಾಜ್ ಕುಮಾರ್, ರವಿಚಂದ್ರನ್, ಜಗ್ಗೇಶ್, ರಮೇಶ್ ಅರವಿಂದ್, ಅನಂತನಾಗ್, ಅರ್ಜುನ್ ಸರ್ಜಾ, ಗಣೇಶ್, ಶ್ರೀಮುರಳಿ, ಧನಂಜಯ, ರಿಷಬ್ ಶೆಟ್ಟಿ, ಧ್ರುವ ಸರ್ಜಾ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ, ಸಾಲುಮರದ ತಿಮ್ಮಕ್ಕ, ಜೋಗತಿ ಮಂಜಮ್ಮ ಹಾಗೂ ಕ್ರಿಕೆಟ್ ಆಟಗಾರ ವೆಂಕಟೇಶ್ ಪ್ರಸಾದ್ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.
ಕನ್ನಡದಲ್ಲಿ ವಂದೇ ಮಾತಂ ಹಾಡನ್ನು ನಿರ್ಮಾಣ ಮಾಡಲು ಜಗ್ಗೇಶ್ ಅವ್ರಿಗೆ ಮಿಲೇ ಸುರ್ ಮೇರಾ ತುಮಾರ ಹಾಡು ಸ್ಫೂರ್ತಿಯಂತೆ. ಕೇವಲ ಹದಿಮೂರು ದಿನಗಳಲ್ಲಿ ಈ ಹಾಡು ನಿರ್ಮಾಣವಾಗಿದ್ದು, ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಮೂಲಕ ಹಾಡು ಆರಂಭವಾಗುತ್ತದೆ ಎಂದು ಜಗ್ಗೇಶ್ ತಿಳಿಸಿದ್ದಾರೆ.
ಇದನ್ನೂ ಓದಿ:75ನೇ ಸ್ವಾತಂತ್ರ್ಯೋತ್ಸವ.. ವಂದೇ ಮಾತರಂ ಹಾಡಿನಲ್ಲಿ ಕನ್ನಡ ತಾರೆಯರ ಮೆರಗು