ಬೆಂಗಳೂರು: ಭಾರತದ 'ಭೂಪಟ'ದಂತೆ ಪ್ರತಿಬಿಂಬಿತವಾಗುವ ಬಯಲು ಸೀಮೆಯ ವರದಾನ ವಾಣಿವಿಲಾಸ ಸಾಗರ ಜಲಾಶಯ, 89 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭರ್ತಿಯಾಗಿ ನಮ್ಮ ನಾಡನ್ನು ಪ್ರಸನ್ನಗೊಳಿಸಿರುವುದು ನನಗೆ ಅತೀವ ಹರ್ಷ ತಂದಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.
89 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ವಾಣಿವಿಲಾಸ ಜಲಾಶಯ ಭರ್ತಿ - Etv Bharat Kannada
ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಸದ್ಯದಲ್ಲೇ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯ ನೆರವೇರಿಸಲಾಗುವುದು ಎಂದು ಗೋವಿಂದ ಕಾರಜೋಳ ತಿಳಿಸಿದ್ದಾರೆ.
ವಾಣಿವಿಲಾಸ ಜಲಾಶಯ
ಈ ಕುರಿತು ಟ್ವೀಟ್ ಮಾಡಿರುವ ಅವರು, ಈ ಜಲಾಶಯಕ್ಕೆ 89 ವರ್ಷಗಳ ನಂತರ ಬಾಗಿನ ಅರ್ಪಿಸುವ ಸೌಭಾಗ್ಯ ಸಿಗಲಿದೆ ಎಂದಿದ್ದಾರೆ. ವಾಣಿವಿಲಾಸ ಸಾಗರ ಜಲಾಶಯಕ್ಕೆ ಸದ್ಯದಲ್ಲೇ ಬಾಗಿನ ಅರ್ಪಿಸುವ ಕಾರ್ಯವನ್ನು ಸರ್ಕಾರದ ಪರವಾಗಿ ನೆರವೇರಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರು ಬಿಡುಗಡೆ