ಬೆಂಗಳೂರು: ನಕ್ಸಲ್ ದಾಳಿ ಪ್ರಕರಣದಲ್ಲಿ ತಮ್ಮ ವಿರುದ್ಧ ತುಮಕೂರಿನ ಮಧುಗಿರಿ ನ್ಯಾಯಾಲಯ ಹೊರಡಿಸಿರುವ ಜಾಮೀನು ರಹಿತ ಬಂಧನ ವಾರಂಟ್ ರದ್ದು ಕೋರಿ ತೆಲುಗು ಕವಿ ವರವರ ರಾವ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಹೇಳಿಲ್ಲ.
ನ್ಯಾಯಾಲಯದ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಲು ಸಿದ್ಧನಿದ್ದೇನೆ. ವೈದ್ಯಕೀಯ ಕಾರಣಗಳ ಮೇಲೆ ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದಿದ್ದೇನೆ. ಜಾಮೀನು ನೀಡುವ ವೇಳೆ ಎನ್ಐಎ ನ್ಯಾಯಾಲಯ ವ್ಯಾಪ್ತಿಯಿಂದ ಹೊರ ಹೋಗದಂತೆ ನಿರ್ಬಂಧಿಸಿದೆ. ಹೀಗಾಗಿ, ಮಧುಗಿರಿ ಕೋರ್ಟ್‌ನ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ.
ಈ ಹಿನ್ನೆಲೆಯಲ್ಲಿ ಮಧುಗಿರಿ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅಕ್ಟೋಬರ್ 21ರಂದು ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ. ಆದರೆ, ಪ್ರಸ್ತುತ ಸಂದರ್ಭದಲ್ಲಿ ನ್ಯಾಯಾಲಯದ ಎದುರು ಹಾಜರಾಗಲು ಸಾಧ್ಯವಿಲ್ಲ.