ಬೆಂಗಳೂರು: ರಾಜ್ಯದ ವಿವಿಧ ಮಠಗಳ ಪೀಠಾಧಿಪತಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಿದರು.
ಸಿಎಂ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ಕೊಟ್ಟ ಮಠಾಧೀಶರ ನಿಯೋಗ - ಸಿಎಂ ಕೋವಿಡ್ ಪರಿಹಾರ ನಿಧಿ
ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿಗಳ ನಿಯೋಗ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆ ಸಲ್ಲಿಸಿತು.
ಈ ನಿಯೋಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕುಂಚಟಿಗ ಗುರುಪೀಠದ ಶಾಂತವೀರ ಸ್ವಾಮೀಜಿ, ಉಪ್ಪಾರ ಗುರುಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ, ಹೊಸದುರ್ಗ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ ಇದ್ದರು.
ಇವರ ಜೊತೆ ಈಡಿಗರ ಗುರುಪೀಠದ ಜಗದ್ಗುರು ರೇಣುಕಾನಂದ ಸ್ವಾಮೀಜಿ, ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಹಡಪದ ಗುರುಪೀಠದ ಜಗದ್ಗುರು ಅನ್ನದಾನಿ ಅಪ್ಪಣ್ಣ ಭಾರತಿ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಗುರುಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿಯವರು , ಅಂಬಿಗರ ಗುರುಪೀಠದ ಜಗದ್ಗುರು ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಯವರನ್ನು ಒಳಗೊಂಡಿತ್ತು.