ಕರ್ನಾಟಕ

karnataka

ETV Bharat / state

ವಸಿಷ್ಠ ಕ್ರೆಡಿಟ್ ಸಹಕಾರಿ ಬ್ಯಾಂಕ್ ಅವ್ಯವಹಾರ: ಆರೋಪಿತರಿಗೆ ಜಾಮೀನು ನಿರಾಕರಿಸಿದ ಕೋರ್ಟ್ - illegal activities of Vasista credit co-operartive bank

ವಸಿಷ್ಠ ಸಹಕಾರಿ ಬ್ಯಾಂಕ್ ತನ್ನ ಠೇವಣಿದಾರರಿಗೆ ಹಣ ಹಿಂದಿರುಗಿಸಲು ವಿಫಲವಾಗಿದೆ. ಮೆಚ್ಯೂರಿಟಿ ಬಾಂಡ್​ಗಳ ಹಣ ಹಾಗೂ ಅದರ ಮೇಲಿನ ಬಡ್ಡಿಯನ್ನು ಪಾವತಿಸದ ಹಿನ್ನೆಲೆಯಲ್ಲಿ 33 ಮಂದಿ ಠೇವಣಿದಾರರು ಸಂಸ್ಥೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

court
ಬೆಂಗಳೂರಿನ 56 ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್

By

Published : Jul 1, 2021, 9:06 PM IST

ಬೆಂಗಳೂರು: ವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೌಹಾರ್ದ ಬ್ಯಾಂಕ್ ಲಿ. ವಿರುದ್ಧ ದಾಖಲಿಸಿರುವ ವಂಚನೆ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬ್ಯಾಂಕ್‌ನ ಇಬ್ಬರು ಮುಖ್ಯಸ್ಥರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿ ಆದೇಶಿಸಿದೆ.

ಬ್ಯಾಂಕ್​ನ ನಿರ್ದೇಶಕರಾದ ಕೆ.ಎನ್ ವೆಂಕಟನಾರಾಯಣ ಹಾಗೂ ಅವರ ಪುತ್ರ ಕೃಷ್ಣಪ್ರಸಾದ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 56 ನೇ ಸಿಟಿ ಸಿವಿಲ್ ಅಂಡ್ ಸೆಷನ್ಸ್ ಕೋರ್ಟ್ ಅರ್ಜಿ ವಜಾ ಮಾಡಿ ಆದೇಶಿಸಿದೆ.

ಪ್ರಕರಣ ಗಂಭೀರ ಸ್ವರೂಪದಿಂದ ಕೂಡಿದ್ದು, ಪೊಲೀಸರ ತನಿಖೆ ಅಗತ್ಯವಾಗಿದೆ. ಹೀಗಾಗಿ ನಿರೀಕ್ಷಣಾ ಜಾಮೀನು ನೀಡಿದರೆ ಆರೋಪಿತರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಸರ್ಕಾರದ ಪರ ಅಭಿಯೋಜಕರು ಮಾಡಿದ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಆರೋಪಿತರ ಜಾಮೀನು ಕೋರಿಕೆಯನ್ನು ವಜಾ ಮಾಡಿದೆ.

ಪ್ರಕರಣದ ಹಿನ್ನೆಲೆ:ವಸಿಷ್ಠ ಸಹಕಾರಿ ಬ್ಯಾಂಕ್ ತನ್ನ ಠೇವಣಿದಾರರಿಗೆ ಹಣ ಹಿಂದಿರುಗಿಸಲು ವಿಫಲವಾಗಿದೆ. ಮೆಚ್ಯೂರಿಟಿ ಬಾಂಡ್​ಗಳ ಹಣ ಹಾಗೂ ಅದರ ಮೇಲಿನ ಬಡ್ಡಿಯನ್ನು ಪಾವತಿಸದ ಹಿನ್ನೆಲೆಯಲ್ಲಿ 33 ಮಂದಿ ಠೇವಣಿದಾರರು ಸಂಸ್ಥೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಮೊದಲಿಗೆ ಬ್ಯಾಂಕ್​ನ ಆಡಳಿತ ಮಂಡಳಿ ಸದಸ್ಯರು ಕೊರೊನಾ ಕಾರಣ ನೀಡಿದ್ದರು.

ಜನರು ಬ್ಯಾಂಕ್​ನಿಂದ ಪಡೆದ ಸಾಲವನ್ನು ಕೊರೊನಾ ಸಂಕಷ್ಟಕ್ಕೆ ಸಿಲುಕಿದ ಕಾರಣಕ್ಕಾಗಿ ಹಿಂಪಾವತಿಸಿಲ್ಲ. ಹೀಗಾಗಿ ಠೇವಣಿದಾರರ ಹಣವನ್ನು ಹಿಂದಿರುಗಿಸಲು ನಮಗೂ ಕಷ್ಟವಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ಸರಿಹೋಗುತ್ತದೆ ಎಂದು ಸಬೂಬು ಹೇಳಿದ್ದರು. ಈ ನಡುವೆ ಠೇವಣಿದಾರರು ನೀಡಿದ ದೂರುಗಳ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆಗೆ ಹಾಜರಾಗುವಂತೆ ಬ್ಯಾಂಕ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಂಧನ ಭೀತಿಗೆ ಒಳಗಾಗಿದ್ದ ನಿರ್ದೇಶಕರು ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ಶ್ರೀ ವಸಿಷ್ಠ ಕ್ರೆಡಿಟ್ ಸೌಹಾರ್ದ ಸಹಕಾರಿ ಬ್ಯಾಂಕ್‌ನಿಂದ ಭಾರೀ ವಂಚನೆ?: ದೂರು ದಾಖಲಾಗ್ತಿದ್ದಂತೆ ಮುಖ್ಯಸ್ಥರು ಪರಾರಿ

For All Latest Updates

TAGGED:

ABOUT THE AUTHOR

...view details