ಕರ್ನಾಟಕ

karnataka

ETV Bharat / state

ಬೆಲೆ ಏರಿಕೆ ವಿರುದ್ಧ ಕಿಡಿ.. ಎತ್ತಿನಗಾಡಿಯಲ್ಲಿ ಕಾರು ಎಳೆದು ವಿಭಿನ್ನವಾಗಿ ಪ್ರತಿಭಟಿಸಿದ ವಾಟಾಳ್ ನಾಗರಾಜ್‌.. - undefined

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಮೆಜೆಸ್ಟಿಕ್‌ವರೆಗೂ ಎತ್ತಿನ ಗಾಡಿಗೆ ಹಗ್ಗ ಕಟ್ಟಿ ಕಾರನ್ನು ಎಳೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಎತ್ತಿನಗಾಡಿಯಲ್ಲಿ ಕಾರು ಎಳೆದು ವಿಭಿನ್ನವಾಗಿ ಪ್ರತಿಭಟಿಸಿದ ವಾಟಾಳ್

By

Published : Jul 13, 2019, 5:03 PM IST

ಬೆಂಗಳೂರು:ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ವಿಭಿನ್ನ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿದರು.

ಎತ್ತಿನಗಾಡಿಯಲ್ಲಿ ಕಾರು ಎಳೆದು ವಿಭಿನ್ನವಾಗಿ ಪ್ರತಿಭಟಿಸಿದ ವಾಟಾಳ್..

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಿಂದ ಮೆಜೆಸ್ಟಿಕ್‌ವರೆಗೂ ಎತ್ತಿನ ಗಾಡಿಗೆ ಹಗ್ಗ ಕಟ್ಟಿ ಕಾರನ್ನು ಎಳೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿದರು. ಇದೇ ವೇಳೆ ಮಾತನಾಡಿದಅವರು, ಕೇಂದ್ರ ಸರ್ಕಾರ ಜನಸಾಮಾನ್ಯರ ಮೇಲೆ ಬರೆ ಎಳೆದು, ಜೇಬಿಗೆ ಕತ್ತರಿ ಹಾಕುವ ಕೆಲಸ ಮಾಡುತ್ತಿದೆ. ತಕ್ಷಣವೇ ಬೆಲೆ ಏರಿಕೆ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದೆ. ಆದರೆ, ಸರ್ಕಾರ ಯಾವುದಕ್ಕೂ ಬೆಲೆ ಕೊಡದೆ ರಾಜಕೀಯದಲ್ಲೇ ಮುಳುಗಿಹೋಗಿದೆ. ನಾನು ಇಂತಹ ಕೀಳುಮಟ್ಟದ ರಾಜಕಾರಣವನ್ನು ಎಂದೂ ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

For All Latest Updates

TAGGED:

ABOUT THE AUTHOR

...view details