ಕರ್ನಾಟಕ

karnataka

ETV Bharat / state

ಬಿಬಿಎಂಪಿಗೆ ಆಡಳಿತಾಧಿಕಾರಿ ನೇಮಕ: ವಿರೋಧಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ - BBMP news

ಬಿಬಿಎಂಪಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ಖಂಡಿಸಿ, ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಬೆಂಬಲಿಗರು ಪ್ರತಿಭಟನೆ ನಡೆಸಿದರು.

ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಮಲಗಿ ಪ್ರತಿಭಟನೆ
ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಮಲಗಿ ಪ್ರತಿಭಟನೆ

By

Published : Sep 12, 2020, 12:02 AM IST

ಬೆಂಗಳೂರು:ಸರಿಯಾದ ಸಮಯಕ್ಕೆ ಚುನಾವಣೆ ನಡೆಸದೆ, ಬಿಬಿಎಂಪಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ವಿರೋಧಿಸಿ, ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಅವರ ಬೆಂಬಲಿಗರು ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಮಲಗಿ ಪ್ರತಿಭಟನೆ ನಡೆಸಿದರು.

ವಾಟಾಳ್ ನಾಗರಾಜ್ ಪ್ರತಿಭಟನೆ

ಆಡಳಿತಾಧಿಕಾರಿ ನೇಮಕ ಪ್ರಜಾಪ್ರಭುತ್ವ ವಿರೋಧಿ ನಡೆ. ಯಾವುದೇ ಕಾರಣಕ್ಕೂ ಆಡಳಿತಾಧಿಕಾರಿ ನೇಮಕ ಮಾಡಬಾರದು. ಇದರಿಂದ ಪಾಲಿಕೆಯಲ್ಲಿ ದುರಾಡಳಿತ ಆರಂಭವಾಗುತ್ತದೆ ಎಂದು ಆರೋಪಿಸಿದರು.

ಪಾಲಿಕೆ ಚುನಾವಣೆ ಬಗ್ಗೆ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಆಡಳಿತಾಧಿಕಾರಿಯ ನೇಮಕವಾದರೆ, ಬಿಬಿಎಂಪಿ ಸರ್ಕಾರದ ಕೈಗೊಂಬೆಯಾಗಲಿದೆ ಎಂದು ಅವರು ದೂರಿದರು.

ABOUT THE AUTHOR

...view details