ಕರ್ನಾಟಕ

karnataka

ETV Bharat / state

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ
ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ

By

Published : Nov 23, 2020, 4:29 PM IST

Updated : Nov 23, 2020, 5:14 PM IST

16:27 November 23

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ರೂ. ಕೋಟಿ ಅನುದಾನ

ಬೆಂಗಳೂರು:ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ‌ ಸ್ಥಾಪನೆಯ ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಇದಕ್ಕಾಗಿ ಆರಂಭಿಕ ಅನುದಾನವಾಗಿ 500 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ರಾಜ್ಯಪಾಲರ ಆದೇಶದ ಅನುಸಾರವಾಗಿ ಇಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಪ್ರಕಟಿಸಿದೆ. ಆದೇಶದಲ್ಲಿ ರಾಜ್ಯದಲ್ಲಿ ವೀರಶೈವ-ಲಿಂಗಾಯತ ಸಮಾಜದ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಲಾಗಿರುತ್ತದೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಆದೇಶಿಸಲಾಗಿದೆ ಎಂದು ತಿಳಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿರುವ ವೀರಶೈವ-ಲಿಂಗಾಯತ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಲಾಗಿದೆ.

ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ 2013, ಸೆಕ್ಷನ್ 7 ರ ಅನ್ವಯ ನೋಂದಾಯಿಸಿ ಸ್ಥಾಪಿಸುವುದು. ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದ ಸ್ಥಾಪನಾ ಕಾರ್ಯಕ್ರಮಗಳ ಸಿದ್ಧತೆಯನ್ನು ಪೂರೈಸಿ ಕೇಂದ್ರ ಸರ್ಕಾರದ ನಿಗಮ ವ್ಯವಹಾರಗಳ ಸಚಿವಾಲಯದ ಅನುಮೋದನೆ ಪಡೆದು ಕೇಂದ್ರ ಸರ್ಕಾರದಲ್ಲಿ ನೋಂದಾಯಿಸುವ ಕಾರ್ಯ ವಹಿಸಲು ಹಾಗೂ ಸದರಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವವರಿಗೆ ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಿಗೆ ವಹಿಸಿದೆ.

ಈ ನಿಗಮ ಸ್ಥಾಪನೆಗೆ ತಗಲುವ ಪ್ರಾರಂಭಿಕ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಭರಿಸಿ ನಂತರ ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮದಿಂದ ಮರು ಭರಣ ಮಾಡುವುದು ಎಂದು ತಿಳಿಸಲಾಗಿದೆ.

Last Updated : Nov 23, 2020, 5:14 PM IST

For All Latest Updates

TAGGED:

ABOUT THE AUTHOR

...view details