ಬೆಂಗಳೂರು:ಲಾಕ್ಡೌನ್ ನಿಯಮಗಳನ್ನು ಮೀರಿ ರಸ್ತೆಗಿಳಿದ ವಾಹನಗಳ ಪೈಕಿ 465 ವಾಹನಗಳನ್ನು ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಹಾಗೂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಕಾಯ್ದೆಯಡಿ ಕೇಸು ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಲಾಕ್ಡೌನ್ ನಿಯಮ ಮೀರಿ ರಸ್ತೆಗಿಳಿದ 465 ವಾಹನಗಳು ಪೊಲೀಸ್ ವಶಕ್ಕೆ
ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಹಾಗೂ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ಕಾಯ್ದೆಯಡಿ ಕೇಸು ದಾಖಲಿಸಿ ಪೊಲೀಸರು, ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 8ರ ವರೆಗೆ ಕಾರ್ಯಾಚರಣೆ ನಡೆಸಿ 465 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
vehicle seized
ನಗರ ಪೊಲೀಸರು ಪ್ರಕಟಣೆ ಬಿಡುಗಡೆ ಮಾಡಿದ್ದು, ಬುಧವಾರ ಬೆಳಗ್ಗೆ 6 ಗಂಟೆಯಿಂದ ಸಂಜೆ 8ರ ವರೆಗೆ ಕಾರ್ಯಾಚರಣೆ ನಡೆಸಿ 465 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
432 ದ್ವಿಚಕ್ರ ವಾಹನ, 15 ತ್ರಿಚಕ್ರ ವಾಹನ ಹಾಗೂ 18 ನಾಲ್ಕು ಚಕ್ರದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘನೆ ಮಾಡಿದ ಐವರ ವಿರುದ್ಧ ಡಿಎಂಎ ಅಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.