ಬೆಂಗಳೂರು:ಕೊರೊನಾ ಪ್ರೇರಿತ ಲಾಕ್ಡೌನ್ನಿಂದಾಗಿ, ನಾಲ್ಕರಿಂದ ಐದು ತಿಂಗಳು ವಾಹನ ಮಾಲೀಕರಿಗೆ ಕೆಲಸವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಮಾಲೀಕರು, ಸರ್ಕಾರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಬೇಡಿಕೆ ಇಟ್ಟಿದ್ದರು.
ವಾಹನ ಮಾಲೀಕರಿಗೆ ಗುಡ್ ನ್ಯೂಸ್: ತೆರಿಗೆ ಇಳಿಕೆ ಮಾಡಿ ಆದೇಶ ಹೊರಡಿಸಿದ ಸರ್ಕಾರ..! - Vehicle tax deduction
ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಹನಗಳ ಮೇಲಿನ ತೆರಿಗೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.
ವಾಹನ ತೆರಿಗೆ ಇಳಿಕೆ
ಇದೀಗ ವಾಹನ ಮಾಲೀಕರ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಹನಗಳ ಮೇಲಿನ ತೆರಿಗೆ ಇಳಿಕೆ ಮಾಡಿದೆ. 900 ರೂ.ಗಳಿಂದ 700 ರೂ.ಗಳಿಗೆ ತೆರಿಗೆ ಕಡಿತಗೊಳಿಸಿ ಆದೇಶ ಹೊರಡಿಸಿದೆ.
ಮೋಟಾರು ವಾಹನಗಳ ತೆರಿಗೆಯನ್ನು ಇಳಿಸಬೇಕೆಂದು ಹಲವಾರು ವಾಹನ ಮಾಲೀಕರು, ವಿವಿಧ ಸಂಘಟನೆಗಳು ಸಲ್ಲಿಸಿದ್ದ ಬೇಡಿಕೆಗೆ ಸ್ಪಂದಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ.