ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಶಾ ಏಪ್ರಿಲ್ 01ರಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರ ಭಾಗದ ಕೆಲ ರಸ್ತೆಗಳ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ನಾಳೆ ಶುಕ್ರವಾರ ಅಮಿತ್ ಶಾ ಅವರು ರಾಜ್ಯಕ್ಕೆ ಬರಲಿದ್ದು, ಬಿಜೆಪಿ ಪ್ರಧಾನ ಕಚೇರಿ ಜಗನಾಥ ಭವನದಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆ, ಮಾರ್ಗೋವಾ 18ನೇ ಕ್ರಾಸ್, 15ನೇ ಕ್ರಾಸ್, 4ನೇ ಕ್ರಾಸ್ 2ನೇ ಟೆಂಪಲ್ ಸ್ಟ್ರೀಟ್ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.