ಬೆಂಗಳೂರು: ಕೇಂದ್ರ ಗೃಹ ಸಚಿವರ ಆಗಮನ ಹಿನ್ನೆಲೆಯಲ್ಲಿ ವಿಧಾನಸೌಧ ಮುಂಭಾಗದ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೂ ವಾಹನಗಳಿಗೆ ಸಂಚರಿಸಲು ಅವಕಾಶ ನಿರ್ಬಂಧಿಸಲಾಗಿದೆ.
ಅಮಿತ್ ಶಾ ಭೇಟಿ: ವಿಧಾನಸೌಧ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ - ಬಿಜೆಪಿ ಕೋರ್ ಕಮಿಟಿ ಸಭೆ
ಶನಿವಾರ ಬೆಂಗಳೂರಿಗೆ ಅಮಿತ್ ಶಾ ಆಗಮನ ಹಿನ್ನೆಲೆಯಲ್ಲಿ ಕೆಲ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ವಿಧಾನಸೌಧ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ
ಕೆ.ಆರ್ ಸರ್ಕಲ್ನಿಂದ ಬಾಳೆಕುಂದ್ರಿ ಸರ್ಕಲ್ ವರೆಗೆ ಸಂಚಾರಕ್ಕೆ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ರಸ್ತೆ ಬದಲಾಗಿ ಕ್ವೀನ್ಸ್ ರಸ್ತೆ, ಕಸ್ತೂರಬಾ ರಸ್ತೆ, ನೃಪತುಂಗ, ಹಡ್ಸನ್ ಸರ್ಕಲ್ ಮಾರ್ಗ ಬಳಕೆ ಮಾಡುವುದಾಗಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ: ಶಮನವಾಗುತ್ತಾ ‘ಸಿಡಿ’ದ ಶಾಸಕರ ಸಿಟ್ಟು?