ಬೆಂಗಳೂರು: ಸ್ಯಾಂಡಲ್ವುಡ್ನ ಸುಪ್ರೀಂ ಹೀರೋ ಶಶಿಕುಮಾರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಶಶಿಕುಮಾರ್ - ಸಿದ್ದರಾಮಯ್ಯ ಅವರನ್ನು ಭೇಟಿಯಾದ ಶಶಿಕುಮಾರ್
ಅನಾರೋಗ್ಯ ಪೀಡಿತರಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಪಕ್ಷಬೇಧ ಮರೆತು ಎಲ್ಲಾ ರಾಜಕೀಯ ಪಕ್ಷಗಳ ನಾಯಕರು, ಚಿತ್ರರಂಗದ ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.
![ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ ನಟ ಶಶಿಕುಮಾರ್ Shashikumar meet Siddaramaiah](https://etvbharatimages.akamaized.net/etvbharat/prod-images/768-512-5372606-thumbnail-3x2-vicky.jpg)
ಸಿದ್ದರಾಮಯ್ಯ ಕಳೆದ ನಾಲ್ಕು ದಿನಗಳ ಹಿಂದೆ ಹೃದಯಕ್ಕೆ ಸ್ಟಂಟ್ ಆಳವಡಿಸಿಕೊಂಡು ಮಲ್ಲೇಶ್ವರಂನ ವೇಗಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಇಂದು ನಟ ಶಶಿಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಶಿಕುಮಾರ್, ಸಿದ್ದರಾಮಯ್ಯನವರು ಹುಷಾರಾಗಿದ್ದಾರೆ. ಹೃದಯದಲ್ಲಿ ಬ್ಲಾಕೇಜ್ ಆಗಿತ್ತು, ಈಗ ಅದನ್ನು ರಿಮೂವ್ ಮಾಡಿದ್ದಾರೆ.
ಕಳೆದ 2 ವರ್ಷಗಳ ಹಿಂದೆ ಅವರಿಗೆ ಹೃದಯಕ್ಕೆ ಸ್ಟಂಟ್ ಆಳವಡಿಸಲಾಗಿತ್ತು. ಈಗ ಅದೇ ಜಾಗದಲ್ಲಿ ಮತ್ತೆ ಸ್ಟಂಟ್ ಹಾಕಲಾಗಿದೆ. ನಾಳೆ ಸಂಜೆ ಸಿದ್ದರಾಮಯ್ಯನವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅವರನ್ನು ದೇವರು ಚೆನ್ನಾಗಿ ಇಟ್ಟಿರಲಿ ಎಂದು ಶಶಿಕುಮಾರ್ ಹೇಳಿದರು.