ಕರ್ನಾಟಕ

karnataka

ETV Bharat / state

ಸಿದ್ದರಾಮಯ್ಯ ನಿವಾಸಕ್ಕೆ ವಿಶ್ವ ಹಿಂದೂ ಪರಿಷತ್ ನಾಯಕರ ಭೇಟಿ; ಯಾಕೆ ಗೊತ್ತಾ?! - ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲು ಸಾರ್ವಜನಿಕರು, ಸಂಘಸಂಸ್ಥೆಗಳಿಂದ ನಿಧಿ ಸಂಗ್ರಹಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಮುಖರು ಇಂದು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

By

Published : Feb 5, 2021, 4:17 AM IST

ಬೆಂಗಳೂರು: ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನದ ನಿಮಿತ್ತ ವಿಶ್ವ ಹಿಂದೂ ಪರಿಷತ್​ನ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ ಸ್ವಾಮಿ ಮತ್ತು ರಂಗಣ್ಣ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿದ್ದಾರೆ.

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಮಾಡಲು ಸಾರ್ವಜನಿಕರು, ಸಂಘಸಂಸ್ಥೆಗಳಿಂದ ನಿಧಿ ಸಂಗ್ರಹಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಪ್ರಮುಖರು, ಪ್ರತಿಯೊಬ್ಬ ಮುಖಂಡರ ಮನೆಗೆ ಭೇಟಿ ಕೊಟ್ಟು ನಿಧಿ ಸಂಗ್ರಹಿಸುವ ಕಾರ್ಯ ಮಾಡುತ್ತಿದ್ದಾರೆ. ಇದೆ ಸಂಗ್ರಹದ ಭಾಗವಾಗಿ ಇಂದು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿಯಾಗಿ ವಿಶ್ವ ಹಿಂದೂ ಪರಿಷತ್ ಮುಖಂಡರು ಚರ್ಚೆ ನಡೆಸಿದ್ದಾರೆ.

ದೇಶಾದ್ಯಂತ ಕೋಟ್ಯಂತರ ಮಂದಿ ರಾಮ ಮಂದಿರ ನಿರ್ಮಾಣಕ್ಕೆ ಶಕ್ತ್ಯಾನುಸಾರ ನಿಧಿ ಸಮರ್ಪಣೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನಿಧಿ ಸಂಗ್ರಹ ಮಾಡಲಾಗುತ್ತಿದೆ. ರಾಜಕೀಯ ನಾಯಕರು, ಮಠಮಾನ್ಯಗಳು, ಧಾರ್ಮಿಕ ಮುಖಂಡರು ಹಾಗೂ ವಿವಿಧ ಸಮುದಾಯ ಸಂಘಟನೆಯ ಮುಖ್ಯಸ್ಥರನ್ನು ಭೇಟಿ ಮಾಡುವ ಕಾರ್ಯ ಮಾಡಲಾಗುತ್ತಿದೆ. ಆಸಕ್ತರು ತಮ್ಮ ಇಷ್ಟಾನುಸಾರ ನಿಧಿ ನೀಡಬಹುದಾಗಿದೆ. ನಿಧಿ ಸಂಗ್ರಹ ವಿಚಾರದಲ್ಲಿ ಯಾವುದೇ ಬಲವಂತ ಇಲ್ಲ ಎಂಬ ಮಾತನ್ನು ಕೂಡ ಸ್ಪಷ್ಟಪಡಿಸಲಾಗಿದೆ.

ಇದನ್ನು ಓದಿ:ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿ ಜಾರಿಗೆ ತಂದಿತ್ತು: ಶಾಸಕ ಹರೀಶ್ ಪೂಂಜ

ABOUT THE AUTHOR

...view details