ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಸೇರಿರುವ ಗಿರಿನಗರ ಶಾಖಾ ಮಠದ ಪುನರ್ವಸು ಕಟ್ಟಡದ ಜಾಗಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತಮ್ಮನ್ನು ಪ್ರತಿವಾದಿಯನ್ನಾಗಿ ಸೇರಿಸಿ ಎಂದು ವಿಶ್ವಭಾರತಿ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಪುನರ್ವಸು ನಿವೇಶನಕ್ಕೆ ಸಂಬಂಧಿಸಿದಂತೆ ಪ್ರತಿವಾದಿಯಾಗಿ ತಮ್ಮನ್ನು ಪರಿಗಣಿಸಬೇಕು ಎಂದು ವಿಶ್ವಭಾರತಿ ಹೌಸಿಂಗ್ ಕೋ ಅಪರೇಟಿವ್ ಸೊಸೈಟಿ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.