ಕರ್ನಾಟಕ

karnataka

ಕರ್ನಾಟಕ ಲೋಕಾಯುಕ್ತ ಸೇರಿದಂತೆ ವಿಧಾನಸಭೆಯಲ್ಲಿ 11 ವಿಧೇಯಕಗಳ ಮಂಡನೆ

By

Published : Jan 29, 2021, 4:46 PM IST

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಅದೇ ರೀತಿ 2020ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಸಿಎಂ ಮಂಡಿಸಿದರು.

vidanasabe-11-obedience-table-news
ವಿಧಾನಸಭೆಯಲ್ಲಿ 11 ವಿಧೇಯಕ ಮಂಡನೆ

ಬೆಂಗಳೂರು:ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕ ಸೇರಿದಂತೆ ಒಟ್ಟು 11 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು.

ಓದಿ: ವಿಧಾನ ಪರಿಷತ್‌ನಲ್ಲಿ ಕುಳಿತು 'ಅಸಹ್ಯ'‌ ವಿಡಿಯೋ ನೋಡಿದ್ರಾ MLC ಪ್ರಕಾಶ್ ರಾಥೋಡ್‌!?

ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧೇಯಕ ಮಂಡನೆಗೆ ಸೂಚಿಸಿದಾಗ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 2020ನೇ ಸಾಲಿನ ಕರ್ನಾಟಕ ಲೋಕಾಯುಕ್ತ (ಮೂರನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಅದೇ ರೀತಿ 2020ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಸಿಎಂ ಮಂಡಿಸಿದರು.

ನಂತರ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಆಶ್ವತ್ಥ ನಾರಾಯಣ, 2020ನೇ ಸಾಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ ವಿಧೇಯಕ, ವಿದ್ಯಾಶಿಲ್ಪ ವಿಶ್ವವಿದ್ಯಾಲಯದ ವಿಧೇಯಕ, 2020ನೇ ಸಾಲಿನ ಏಟ್ರಿಯಾ ವಿವಿ ವಿದ್ಯಾಲಯ ಹಾಗೂ ಬೆಂಗಳೂರು ಡಾ. ಬಿ.ಆರ್.ಅಂಬೇಡ್ಕರ್ ಅರ್ಥಶಾಸ್ತ್ರ ವಿದ್ಯಾಲಯದ (ತಿದ್ದುಪಡಿ) ವಿಧೇಯಕ ಮಂಡಿಸಿದರು.

ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, 2020ನೇ ಸಾಲಿನ ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್, 2020ನೇ ಸಾಲಿನ ಕರ್ನಾಟಕ ಸಾಂಕ್ರಾಮಿಕ ರೋಗಗಳ (ತಿದ್ದುಪಡಿ) ವಿಧೇಯಕವನ್ನು ಮಂಡನೆ ಮಾಡಿದರು.

ಪೌರಡಳಿತ ಹಾಗೂ ಕಬ್ಬು ಅಭಿವೃದ್ದಿ ಸಚಿವ ಎಂಟಿಬಿ ನಾಗರಾಜ್, ಕರ್ನಾಟಕ ಪೌರಸಭೆಗಳು ಮತ್ತು ಕೆಲವು ಇತರ ಕಾನೂನು (ತಿದ್ದುಪಡಿ) ವಿಧೇಯಕ ಹಾಗೂ
2021ನೇ ಸಾಲಿನ ಕರ್ನಾಟಕ ಪೌರಸಭೆಗಳ (ಎರಡನೇ ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು.

ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್.ಶಂಕರ್, 2020ನೇ ಸಾಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ನಂತರ ಸದನದಲ್ಲಿ ಎಲ್ಲಾ ವಿಧೇಯಕಗಳನ್ನು ಅಂಗೀಕರಿಸಲಾಯಿತು.

ABOUT THE AUTHOR

...view details