ಬೆಂಗಳೂರು:ಯಾವುದೇ ಆರೋಪಿಗೆ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಅಗತ್ಯವಿಲ್ಲ. ಬದಲಿಗೆ, ವಿಡಿಯೋ ಕಾನ್ಫರೆನ್ಸ್ ಮೂಲಕವೇ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.
ಆರೋಪಿಗೆ ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ವಿಡಿಯೋ ಕಾನ್ಫರೆನ್ಸ್ ಸಾಕು: ಹೈಕೋರ್ಟ್ ಸೂಚನೆ - ಆರೋಪಿಗೆ ಕೊರೊನಾ ಸೋಂಕು
ನ್ಯಾಯಾಲಯಕ್ಕೆ ಹಾಜರುಪಡಿಸುವ ಆರೋಪಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿದ್ದರೂ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸುವುದು ಬೇಡ. ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ರಾಜ್ಯದ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ವೇಳೆ ಅಥವಾ ರಿಮ್ಯಾಂಡ್ ಅವಧಿಯನ್ನು ವಿಸ್ತರಿಸುವ ವೇಳೆ ಪೊಲೀಸರು ಸಾಮಾನ್ಯವಾಗಿ ನ್ಯಾಯಾಲಯಗಳ ಎದುರು ನೇರವಾಗಿ ಹಾಜರುಪಡಿಸುತ್ತಾರೆ. ಹೀಗೆ ನ್ಯಾಯಾಲಯದೆದುರು ಹಾಜರುಪಡಿಸುವ ಆರೋಪಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳಿದ್ದರೂ ಅವರನ್ನು ನ್ಯಾಯಾಲಯದ ಎದುರು ಹಾಜರುಪಡಿಸುವುದು ಬೇಡ. ಬದಲಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ರಾಜ್ಯದ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ.
ನಿಯಮಾನುಸಾರ ಬಂಧಿತ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಗಳ ಎದುರು ನೇರವಾಗಿ ಕರೆತಂದು ಹಾಜರುಪಡಿಸುತ್ತಾರೆ. ಹೀಗೆ ಹಾಜರುಪಡಿಸಿದ ಆರೋಪಿಯೊಬ್ಬನಿಗೆ ಇತ್ತೀಚಿಗೆ ಕೊರೊನಾ ಸೋಂಕು ತಗುಲಿತ್ತು. ಆ ಬಳಿಕ ಮೇಯೊ ಹಾಲ್ ಕೋರ್ಟ್‌ಗೆ ಸಂಪೂರ್ಣವಾಗಿ ಸ್ಯಾನಿಟೈಸೇಶನ್ ಮಾಡಲಾಗಿತ್ತು. ಹಾಗೆಯೇ ನ್ಯಾಯಾಧೀಶರು, ಕೋರ್ಟ್ ಸಿಬ್ಬಂದಿ ಹಾಗೂ ವಕೀಲರನ್ನು 14 ದಿನಗಳ ಕಾಲ ಕಡ್ಡಾಯವಾಗಿ ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್ ಸುಗಮ ಕಲಾಪ ನಡೆಸಲು ಹಾಗೂ ನ್ಯಾಯಾಧೀಶರು, ವಕೀಲರು ಮತ್ತು ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಈ ಆದೇಶ ಹೊರಡಿಸಿದೆ.