ಕರ್ನಾಟಕ

karnataka

ETV Bharat / state

ಸದನದಲ್ಲಿ ಗದ್ದಲ: ಪರಿಷತ್​​ ಕಲಾಪ‌ ಸಂಜೆಗೆ ಮುಂದೂಡಿಕೆ - undefined

ವಿಧಾನ ಪರಿಷತ್​​ನಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ಸಂಜೆ 5:30ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಲಾಪ

By

Published : Jul 18, 2019, 4:49 PM IST

Updated : Jul 18, 2019, 5:14 PM IST

ಬೆಂಗಳೂರು:ವಿಧಾನ ಪರಿಷತ್​​ನಲ್ಲಿ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಕಲಾಪವನ್ನು ಸಂಜೆ 5:30ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಮಧ್ಯಾಹ್ನದ ಕಲಾಪ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.‌ ಅಲ್ಪಮತದ ಸರ್ಕಸರ ರಾಜೀನಾಮೆ ನೀಡಲಿ ಎಂದು ಭಿತ್ತಿ ಪತ್ರ ಪ್ರದರ್ಶಿಸಿ ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಕೆಳ ಮನೆಯಲ್ಲಿ ನಡೆಯುತ್ತಿರುವುದನ್ನು ಗಮನಿಸಿದರೆ ಸರ್ಕಾರ ಉದ್ದೇಶಪೂರ್ವಕವಾಗಿ ಕಾಲಹರಣ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗುತ್ತಿದೆ.

ಅಲ್ಪ ಮತಕ್ಕೆ ಕುಸಿದ ಸರ್ಕಾರ ಕೂಡಲೇ ರಾಜೀನಾಮೆ ನೀಡಿ ಹೊರ ಹೋಗಬೇಕು ಎಂದು ಆಗ್ರಹಿಸಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಗದ್ದಲದ ಹಿನ್ನೆಲೆಯಲ್ಲಿ ಕಲಾಪವನ್ನು ಸಂಜೆ 5:30ಕ್ಕೆ ಮುಂದೂಡಿಕೆ ಮಾಡುತ್ತಿರುವುದಾಗಿ ಸಭಾಪತಿ ಪ್ರಕಟಿಸಿ ಕಲಾಪ ಮುಂದೂಡಿಕೆ ಮಾಡಿದರು.

Last Updated : Jul 18, 2019, 5:14 PM IST

For All Latest Updates

TAGGED:

ABOUT THE AUTHOR

...view details